HomeKarnataka Newsನಾಡಿನ ಸಮೃದ್ಧಿ ಹಾಗೂ ಅಭಿವೃದ್ಧಿಗೆ ಗಾಣಗಾಪುರ ದತ್ತಾತ್ರೇಯನಲ್ಲಿ ವಿಶೇಷ ಪ್ರಾರ್ಥನೆ: ಸಿಎಂ ಡಿ ಕೆ ಶಿವಕುಮಾರ್

ನಾಡಿನ ಸಮೃದ್ಧಿ ಹಾಗೂ ಅಭಿವೃದ್ಧಿಗೆ ಗಾಣಗಾಪುರ ದತ್ತಾತ್ರೇಯನಲ್ಲಿ ವಿಶೇಷ ಪ್ರಾರ್ಥನೆ: ಸಿಎಂ ಡಿ ಕೆ ಶಿವಕುಮಾರ್

For Dai;y Updates Join Our whatsapp Group

ಗಾಣಗಾಪುರ: “ರಾಜ್ಯದಲ್ಲಿ ತಲೆದೋರಿರುವ ಭೀಕರ ಬರಗಾಲದಿಂದ ಜನತೆಗೆ ಮುಕ್ತಿ ಸಿಗಲಿ, ನಾಡಿನಲ್ಲಿ ಉತ್ತಮ ಮಳೆ- ಬೆಳೆಯಾಗಿ ಶಾಂತಿ, ನೆಮ್ಮದಿ ನೆಲೆಸಲಿ ಎಂದು ಗಾಣಗಾಪುರ ದತ್ತಾತ್ರೇಯನಲ್ಲಿ ಪ್ರಾರ್ಥಿಸಿದ್ದೇನೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ಅವರು ಗಾಣಗಾಪುರದ ಶ್ರೀ ದತ್ತಾತ್ರೇಯ ಸ್ವಾಮಿಯ ಸನ್ನಿಧಿಗೆ ಗುರುವಾರ ಭೇಟಿ ನೀಡಿ ಪೂಜೆ ಸಲ್ಲಿಸಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

‘ಗಾಣಗಾಪುರ ದಕ್ಷಿಣ ಭಾರತದ ಅತ್ಯಂತ ಪವಿತ್ರ ಹಾಗೂ ಶ್ರೇಷ್ಠ ಪುಣ್ಯಕ್ಷೇತ್ರವಾಗಿದೆ. ಇಲ್ಲಿಗೆ ಆಗಮಿಸುವ ಭಕ್ತರ ಮನೋಕಾಮನೆಗಳು ಈಡೇರುತ್ತವೆ ಎಂಬ ದೃಢ ನಂಬಿಕೆಯಿದೆ. ನನ್ನ ಕಷ್ಟಕಾಲದಲ್ಲಿ ಹಾಗೂ ಅಭಿವೃದ್ಧಿಯ ಪಯಣದಲ್ಲಿ ಇಲ್ಲಿನ ಅರ್ಚಕರು ಮತ್ತು ಅಭಿಮಾನಿಗಳು ತಮಗಾಗಿ ಹಾಗೂ ರಾಜ್ಯದ ಶ್ರೇಯಸ್ಸಿಗೆ ನಿರಂತರ ಪ್ರಾರ್ಥನೆ ಸಲ್ಲಿಸಿದ್ದರು. ಇವತ್ತು ಬಹಳ ಪುಣ್ಯದಿನ. 79ನೇ ಕಲ್ಯಾಣ ಕರ್ನಾಟಕ ಉತ್ಸವ ಸಂದರ್ಭದಲ್ಲಿ ಭಗವಂತನ ಪ್ರಾರ್ಥನೆ ಮಾಡುವ ಭಾಗ್ಯ ನನಗೆ ದೊರೆತಿದೆ’ ಎಂದರು.

ಗಾಣಗಾಪುರ ಕ್ಷೇತ್ರಕ್ಕೆ ಮೂಲಸೌಕರ್ಯ ಅಭಿವೃದ್ಧಿ

“ಗಾಣಗಾಪುರ ಕ್ಷೇತ್ರದ ಸಮಗ್ರ ಅಭಿವೃದ್ಧಿ ಹಾಗೂ ಭಕ್ತಾದಿಗಳಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ನಮ್ಮ ಸರ್ಕಾರ ಈಗಾಗಲೇ ಸೂಕ್ತ ಯೋಜನೆಗಳನ್ನು ಘೋಷಿಸಿದೆ. ಸ್ಥಳೀಯ ಶಾಸಕರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಮನವಿಯಂತೆ ಹಂತ- ಹಂತವಾಗಿ ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು” ಎಂದು ಅವರು ಭರವಸೆ ನೀಡಿದರು.

“ರಾಜ್ಯದಲ್ಲಿ ಬರಗಾಲ ಪರಿಸ್ಥಿತಿ ಎದುರಾಗಿದೆ. ಬಿಜೆಪಿ ಪಕ್ಷದ ನಾಯಕರು ಅಧಿವೇಶನದಲ್ಲಿ ಚರ್ಚೆ ಮಾಡದೆ, ಕೇವಲ ರಾಜಕೀಯ ಮಾಡಿದರು. ಬರಗಾಲ ಕುರಿತು ಚರ್ಚಿಸಲು ಈ ತಿಂಗಳ 21ರಿಂದ 3 ದಿನಗಳ ಕಾಲ ವಿಶೇಷ ಅಧಿವೇಶನ ಕರೆಯಲಾಗಿದೆ” ಎಂದರು.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img