ಮಹಿಳೆಯರ ಆರೋಗ್ಯಕ್ಕೆ ಕ್ರೀಡೆ ಸಹಕಾರಿ

0
sports
Spread the love

ವಿಜಯಸಾಕ್ಷಿ ಸುದ್ದಿ, ಗದಗ : ಮಹಿಳೆಯರು ಆರೋಗ್ಯಯುತ ಜೀವನ ನಡೆಸಲು ಕ್ರೀಡೆಗಳು ಸಹಕಾರಿಯಾಗುತ್ತವೆ ಎಂದು ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ. ಅಭಿಪ್ರಾಯಪಟ್ಟರು.

Advertisement

ನಗರದ ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಮಹಿಳಾ ದಿನಾಚರಣೆಯ ನಿಮಿತ್ಯ ಹಮ್ಮಿಕೊಳ್ಳಲಾಗಿದ್ದ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕ್ರೀಡೆಗಳಲ್ಲಿ ಪಾಲ್ಗೊಳ್ಳುವುದರ ಮೂಲಕ ಮಹಿಳೆಯರು ಆರೋಗ್ಯ ಕಾಪಾಡಿಕೊಳ್ಳಬೇಕು. ಮಹಿಳೆಯರಿಗೆ ಆರೋಗ್ಯ ಸಂಪತ್ತು ಬಹಳ ಮುಖ್ಯವಾಗಿದೆ. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಮಹಿಳೆಯರಿಗಾಗಿ ಕ್ರೀಡಾಕೂಟಗಳನ್ನು ಹಮ್ಮಿಕೊಂಡಿದ್ದು ಪ್ರಶಂಸನೀಯವಾಗಿದೆ ಎಂದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಶರಣು ಗೋಗೇರಿ ಸರ್ವರನ್ನು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿ, ಮಹಿಳೆಯರಿಗಾಗಿ 25ರಿಂದ 45 ವಯಸ್ಸಿನವರೆಗೆ ಹಾಗೂ 46ರ ಮೇಲ್ಪಟ್ಟ ವಯಸ್ಸಿನ ಸ್ಪರ್ಧಾರ್ಥಿಗಳಿಗೆ 2 ಗುಂಪುಗಳಲ್ಲಿ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದರು.

ಕಾರ್ಯಕ್ರಮದಲ್ಲಿ ಬಸವ ಯೋಗ ಪಾಠಶಾಲೆಯ ಪ್ರಾಚಾರ್ಯ ಕೆ.ಎಸ್. ಪಲ್ಲೇದ, ಪಿಎಸ್‌ಐ ಎಂ.ಡಿ ಪಾಟೀಲ ಸೇರಿದಂತೆ ಕ್ರೀಡಾಪಟುಗಳು ಹಾಜರಿದ್ದರು. ವೆಂಕಟೇಶ ಅಲ್ಕೋಡ ನಾಡಗೀತೆ ಪ್ರಸ್ತುತಪಡಿಸಿದರು. ಗೀತಾಂಜಲಿ ಗೌಡರ ಕಾರ್ಯಕ್ರಮ ನಿರೂಪಿಸಿದರು. ಚಂದ್ರಶೇಖರ ಮೇಲಿನಮನಿ ವಂದಿಸಿದರು.


Spread the love

LEAVE A REPLY

Please enter your comment!
Please enter your name here