HomeSports Newsಕ್ರೀಡೆ ಉತ್ತಮ ಜೀವನಕ್ಕೆ ಸಹಕಾರಿ : ಬೂದೀಶ್ವರ ಸ್ವಾಮೀಜಿ

ಕ್ರೀಡೆ ಉತ್ತಮ ಜೀವನಕ್ಕೆ ಸಹಕಾರಿ : ಬೂದೀಶ್ವರ ಸ್ವಾಮೀಜಿ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಮುಳಗುಂದ : ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಜರಗುವ ಕ್ರೀಡೆಯಲ್ಲಿ ಭಾಗವಹಿಸುವುದರಿಂದ ಉತ್ತಮ ಜೀವನ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಹೊಸಳ್ಳಿ ಅಭಿನವ ಬೂದೀಶ್ವರ ಸ್ವಾಮೀಜಿ ಹೇಳಿದರು.

ಅವರು ಪಟ್ಟಣ ಸಮೀಪದ ಹೊಸಳ್ಳಿ ಗ್ರಾಮದ ಜಗದ್ಗುರು ಬೂದೀಶ್ವರ ವಿದ್ಯಾಪೀಠ ಪ್ರಾಥಮಿಕ ಹಾಗೂ ಪ್ರೌಢಶಾಲೆಯಿಂದ ಕ್ರೀಡಾಕೂಟದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳನ್ನು ಗೌರವಿಸಿ ಮಾತನಾಡಿ, ಪ್ರಾಥಮಿಕ ಹಂತದಲ್ಲಿ ಕ್ರೀಡಾಕೂಟದಲ್ಲಿ ಪ್ರತಿಯೊಬ್ಬರೂ ಭಾಗವಹಿಸಬೇಕು. ಕ್ರೀಡೆಯಿಂದ ಮಾನಸಿಕ ಹಾಗೂ ದೈಹಿಕ ಸಾಮರ್ಥ್ಯ ಹೆಚ್ಚುವುದಲ್ಲದೆ, ಭವಿಷ್ಯದ ಜೀವನಕ್ಕೂ ಸಹಕಾರಿಯಾಗುವುದು ಎಂದರು.

ಕುಸ್ತಿಯಲ್ಲಿ ಮಾನಸಾ ಇಳಗೇರ, ಎತ್ತರ ಜಿಗಿತದಲ್ಲಿ ಲಿಂಗರಾಜ ಮೇಟಿ, ಕೀರ್ತಿ ಮರದಬುಡುಕಿನ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುವುದಕ್ಕೆ ಅಭಿನವ ಬೂದೀಶ್ವರ ಸ್ವಾಮೀಜಿ, ಶಾಲಾ ಆಡಳಿತ ಮಂಡಳಿ ಹಾಗೂ ಶಿಕ್ಷಕ ವೃಂದದವರು ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here

E-Paper

E-paper

Must Read

spot_img