ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಪಟ್ಟಣದ ಬಿಸಿಎನ್ ಸ್ಪೆಕ್ಟ್ರಮ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ದಿವ್ಯಶ್ರೀ ಕಟ್ಟಿಮನಿ ಗದಗದಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದ 100 ಮೀಟರ್ ಓಟ ಮತ್ತು ಹರ್ಡಲ್ಸ್‌ನಲ್ಲಿ ಪ್ರಥಮ ಸ್ಥಾನ ಪಡೆದು 2ನೇ ಬಾರಿಗೆ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.
ಸೈದಾ ಆಲಿಯಾ ಪಿರ್ಜಾದೆ 100 ಮೀಟರ್ ಓಟ ಮತ್ತು ತ್ರಿವಿಧ ಜಿಗಿತದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಈ ವಿದ್ಯಾರ್ಥಿಗಳ ಸಾಧನೆಗೆ ಶಾಲಾ ಆಡಳಿತ ಮಂಡಳಿಯ ಕಾರ್ಯದರ್ಶಿ ಲೋಹಿತ್ ನೆಲವಗಿ ಮತ್ತು ಶಾಲೆಯ ಶಿಕ್ಷಕ ವೃಂದ ಹರ್ಷ ವ್ಯಕ್ತಪಡಿಸಿದೆ.



