ವಿಜಯಸಾಕ್ಷಿ ಸುದ್ದಿ, ಮುಳಗುಂದ : ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಕ್ರೀಡೆ ಸಹಕಾರಿಯಾಗಿದೆ ಎಂದು ದೈಹಿಕ ಶಿಕ್ಷಕ ಎನ್.ವಾಯ್. ಸಂಗೊಂದಿ ಹೇಳಿದರು.
ಅವರು ಪಟ್ಟಣದ ಎಸ್‌ಜೆಜೆಎಂ ಸಂಯುಕ್ತ ಪದವಿಪೂರ್ವ ಮಾಹಾವಿದ್ಯಾಲಯದಲ್ಲಿ ವಿವಿಧ ಕ್ರೀಡಾಕೂಟದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಕ್ರೀಡಾಪಟುಗಳನ್ನು ಗೌರವಿಸಿ ಮಾತನಾಡಿ, ಕ್ರೀಡೆಯಲ್ಲಿ ಭಾಗವಹಿಸುವುದರಿಂದ ದೈಹಿಕ ಹಾಗೂ ಮಾನಸಿಕವಾಗಿ ವಿದ್ಯಾರ್ಥಿಗಳು ಸಧೃಢರಾಗಲು ಸಹಕಾರಿಯಾಗುತ್ತದೆ ಹಾಗೂ ಭವಿಷ್ಯದ ಉತ್ತಮ ಜೀವನಕ್ಕೆ ಸಹಕಾರಿಯಾಗುತ್ತದೆ ಎಂದರು.
ಎಸ್.ಆರ್. ಹಿರೇಗೌಡ್ರ ಮಾತನಾಡಿ, ನಮ್ಮ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುವುದು ನಮ್ಮ ಸಂಸ್ಥೆಗೆ ಹೆಮ್ಮೆಯಾಗುತ್ತದೆ. ಮಕ್ಕಳು ಕಲಿಕೆಯ ಜೊತೆಯಲ್ಲಿ ಕ್ರೀಡೆಯಲ್ಲಿ ಭಾಗವಹಿಸಲು ಎಂದೂ ಹಿಂಜರಿಯಬಾರದು ಎಂದರು.
ಪ್ರಾಚಾರ್ಯ ಎ.ಎಂ. ಅಂಗಡಿ, ಶಿಕ್ಷಣ ಸಂಸ್ಥೆಯ ಚೇರಮನ್ ಎಂ.ಡಿ. ಬಟ್ಟೂರ, ಆರ್.ಆರ್. ಪಟ್ಟಣ, ಇ.ಎಂ. ಗುಳೆದಗುಡ್ಡ, ಸಿ.ಎಚ್. ದೊಡ್ಡಮನಿ, ಎಸ್.ಪಿ. ಶಿರೂರ ಸೇರಿದಂತೆ ಕಾಲೇಜು ಉಪನ್ಯಾಸಕರು ಇದ್ದರು.