ವಿಜಯಸಾಕ್ಷಿ ಸುದ್ದಿ, ಹುಲಕೋಟಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಕ್ರೀಡಾ ಕಾರ್ಯದರ್ಶಿಗಳಾದ ಇಮಾಮಸಾಬ ಗಾಡಗೋಳಿ ಅವರ ಜನ್ಮದಿನವನ್ನು ಹುಲಕೋಟಿಯಲ್ಲಿರುವ ಅವರ ಸ್ವಗೃಹದಲ್ಲಿ ಸಂಭ್ರಮದಿಂದ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷರು ಹಾಗೂ ಗದಗ ಜಿಲ್ಲಾ ಘಟಕದ ಅಧ್ಯಕ್ಷರಾದ ಬಸವರಾಜ ವೆಂಕಪ್ಪ ಬಳ್ಳಾರಿ ಕೇಕ್ ಕತ್ತರಿಸುವ ಮೂಲಕ ಜನ್ಮದಿನದ ಸಂಭ್ರಮಾಚರಣೆಗೆ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ಇಮಾಮಸಾಬ ಗಾಡಗೋಳಿಯವರು ನೌಕರರ ಸಂಘಟನೆ ಬಲವರ್ಧನೆ, ನೌಕರರ ಹಿತಾಸಕ್ತಿಗಳ ರಕ್ಷಣೆ ಹಾಗೂ ಕ್ರೀಡಾ ಕ್ಷೇತ್ರದ ಅಭಿವೃದ್ಧಿಗೆ ಗಮನಾರ್ಹ ಸೇವೆ ಸಲ್ಲಿಸಿದ್ದಾರೆ. ರಾಜ್ಯ ಮಟ್ಟದ ಕ್ರೀಡಾ ಚಟುವಟಿಕೆಗಳನ್ನು ಯಶಸ್ವಿಯಾಗಿ ಸಂಘಟಿಸುವ ಮೂಲಕ ನೌಕರರ ವಲಯದಲ್ಲಿ ವಿಶೇಷ ಗೌರವಕ್ಕೆ ಪಾತ್ರರಾಗಿದ್ದಾರೆ ಎಂದು ಶ್ಲಾಘಿಸಿದರು.
ಕಾರ್ಯಕ್ರಮದಲ್ಲಿ ರಾಜ್ಯ ಘಟಕದ ಜಂಟಿ ಕಾರ್ಯದರ್ಶಿಗಳಾದ ರಾಜು ಕಂಟಿಗೊಣ್ಣವರ, ಅಮೀರನಾಯಕ, ಮುತ್ತು ಮಲಕಶೆಟ್ಟಿ, ಎಸ್.ಎಸ್. ಪಾರ್ವತಿಮಠ, ಕರೀಮಸಾಬ ಸುಣಗಾರ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದು, ಗಾಡಗೋಳಿಯವರಿಗೆ ಜನ್ಮದಿನದ ಶುಭಾಶಯಗಳನ್ನು ಅರ್ಪಿಸಿದರು.
ಕೊನೆಯಲ್ಲಿ ಇಮಾಮಸಾಬ ಗಾಡಗೋಳಿಯವರು ಶುಭಾಶಯ ಸಲ್ಲಿಸಿದ ಎಲ್ಲರಿಗೂ ಕೃತಜ್ಞತೆಗಳನ್ನು ಅರ್ಪಿಸಿದರು.
“ನೌಕರರ ಹಿತಾಸಕ್ತಿ ಹಾಗೂ ಕ್ರೀಡಾ ಚಟುವಟಿಕೆಗಳ ಉತ್ತೇಜನಕ್ಕಾಗಿ ಇಮಾಮಸಾಬ ಗಾಡಗೋಳಿಯವರು ಸಲ್ಲಿಸಿರುವ ಸೇವೆ ಶ್ಲಾಘನೀಯ. ಅವರ ಸಾಮಾಜಿಕ ಬದ್ಧತೆ ಮತ್ತು ಸರಳ ವ್ಯಕ್ತಿತ್ವ ಎಲ್ಲರಿಗೂ ಮಾದರಿಯಾಗಿದೆ.”
– ಬಸವರಾಜ ವೆಂಕಪ್ಪ ಬಳ್ಳಾರಿ, ರಾಜ್ಯ ಉಪಾಧ್ಯಕ್ಷರು, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ



