HomeGadag Newsಕ್ರೀಡಾಪಟುಗಳು ಜಿಲ್ಲೆಯ ಕೀರ್ತಿ ಹೆಚ್ಚಿಸಿ: ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್

ಕ್ರೀಡಾಪಟುಗಳು ಜಿಲ್ಲೆಯ ಕೀರ್ತಿ ಹೆಚ್ಚಿಸಿ: ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ: ಕ್ರೀಡೆಗಳಿಂದ ಮಾನಸಿಕ ಹಾಗೂ ದೈಹಿಕ ಸದೃಢತೆ ಸಾಧ್ಯ ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ತಿಳಿಸಿದರು.

ನಗರದ ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಗುರುವಾರ ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಗದಗ ಇವರ ಸಹಯೋಗದಲ್ಲಿ ಏರ್ಪಡಿಸಲಾಗಿದ್ದ ಬೆಳಗಾವಿ ವಿಭಾಗ ಮಟ್ಟದ ದಸರಾ ಕ್ರೀಡಾಕೂಟ (ಫುಟ್ಬಾಲ್ ಮತ್ತು ಹಾಕಿ)ವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕ್ರೀಡಾಪಟುಗಳು ಸೋಲು–ಗೆಲುವನ್ನು ಸಮಾನವಾಗಿ ಸ್ವೀಕರಿಸಿ ಕ್ರೀಡಾ ಮನೋಭಾವವನ್ನು ಬೆಳೆಸಿಕೊಳ್ಳಬೇಕು. ಗದಗ ಜಿಲ್ಲೆಯ ಕ್ರೀಡಾಪಟುಗಳು ರಾಜ್ಯ ಮಟ್ಟದಲ್ಲಿಯೂ ಪಾಲ್ಗೊಂಡು ಜಿಲ್ಲೆಗೆ ಕೀರ್ತಿ ತರಬೇಕೆಂದರು.

ಗದಗ-ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಚಿ ಮಾತನಾಡಿ, ಬೆಳಗಾವಿ ವಿಭಾಗ ಮಟ್ಟದ ದಸರಾ ಕ್ರೀಡಾಕೂಟಕ್ಕೆ ವಿವಿಧ ಜಿಲ್ಲೆಗಳಿಂದ ಕ್ರೀಡಾಪಟುಗಳು ಆಗಮಿಸಿದ್ದಾರೆ. ಕ್ರೀಡೆಗಳಲ್ಲಿ ಸೋಲು–ಗೆಲುವು ಮುಖ್ಯವಲ್ಲ. ಪಾಲ್ಗೊಳ್ಳುವುದೇ ಮುಖ್ಯ. ಕ್ರೀಡಾಪಟುಗಳು ನಿರ್ಣಾಯಕರ ನಿರ್ಣಯವನ್ನು ಪಾಲಿಸಿ ಕ್ರೀಡಾಕೂಟವನ್ನು ಯಶಸ್ವಿಗೊಳಿಸಬೇಕೆಂದು ಕರೆ ನೀಡಿದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಶರಣು ಗೋಗೇರಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿ, ಬೆಳಗಾವಿ ವಿಭಾಗ ಮಟ್ಟದ ದಸರಾ ಕ್ರೀಡಾಕೂಟಗಳು (ಫುಟ್ಬಾಲ್ ಮತ್ತು ಹಾಕಿ) ಸೆಪ್ಟೆಂಬರ್ 11 ಮತ್ತು 12 ರಂದು ಜರುಗುತ್ತಿವೆ. ಫುಟ್ಬಾಲ್ ಕ್ರೀಡಾಕೂಟ ನಗರದ ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಹಾಗೂ ಹಾಕಿ ಕ್ರೀಡಾಕೂಟ ಗದಗ-ಬೆಟಗೇರಿಯ ಮಹಾತ್ಮ ಗಾಂಧಿ ಹಾಕಿ ಕ್ರೀಡಾಂಗಣದಲ್ಲಿ ಜರುಗಲಿವೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ನಗರಸಭೆ ಸದಸ್ಯ ಸುರೇಶ ಕಟ್ಟಿಮನಿ, ಮೋಹನ ಕಟ್ಟಿಮನಿ, ಹನುಮಂತಪ್ಪ ವೀರಾಪೂರ, ಎಚ್.ಬಿ. ಗಡಾದ, ಸರ್ಫರಾಜ್ ಶೇಖ್, ದೈಹಿಕ ಶಿಕ್ಷಕರು, ವಿವಿಧ ಜಿಲ್ಲೆಗಳಿಂದ ಆಗಮಿಸಿದ ಕ್ರೀಡಾಪಟುಗಳು ಹಾಜರಿದ್ದರು. ಎಂ.ಎ. ಯರಗುಡಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ. ಅಸೂಟಿ ಮಾತನಾಡಿ, ಗದಗ ಜಿಲ್ಲೆಯ ಹಾಕಿ ಕ್ರೀಡಾಪಟುಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿರುವುದು ನಮಗೆಲ್ಲ ಹೆಮ್ಮೆಯ ವಿಷಯವಾಗಿದೆ. ಜಿಲ್ಲಾ ಮಟ್ಟದಿಂದ ಈಗ ವಿಭಾಗ ಮಟ್ಟದ ಕ್ರೀಡಾಕೂಟಕ್ಕೆ ವಿವಿಧ ಜಿಲ್ಲೆಗಳಿಂದ ಕ್ರೀಡಾಪಟುಗಳು ಗದಗ ಜಿಲ್ಲೆಗೆ ಆಗಮಿಸಿದ್ದಾರೆ. ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಕ್ರೀಡಾಪಟುಗಳು ಪಾಲ್ಗೊಳ್ಳಬೇಕೆಂದು ಕರೆ ನೀಡಿದರು.

 


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!