ತುಮಕೂರು:- ಕೃಷಿ ಹೊಂಡದಲ್ಲಿ ಸೋಡಿಯಂ ಮೆಟಲ್ ಬಳಸಿ ಸ್ಪೋಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಡ್ರೋನ್ ಪ್ರತಾಪ್ ರನ್ನು 3 ದಿನ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ.
ಪ್ರಕರಣ ಸಂಬಂಧ ಮಧುಗಿರಿಯ ಜೆಎಂಎಫ್‍ಸಿ ನ್ಯಾಯಾಲಯ ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ಇನ್ನೂ ಘಟನೆ ಸಂಬಂಧ ಮಿಡಿಗೇಶಿ ಪೊಲೀಸರು, ಡ್ರೊಣ್ ಪ್ರತಾಪ್, ಜಮೀನಿನ ಮಾಲೀಕ ಸೇರಿದಂತೆ ಮೂವರ ಮೇಲೆ ಎಫ್‍ಐಆರ್ ದಾಖಲಿಸಿದ್ದಾರೆ. ಪೊಲೀಸರು ಪ್ರತಾಪ್‌ನನ್ನ ಕರೆತಂದು ಸ್ಫೋಟ ನಡೆಸಿದ್ದ ಸ್ಥಳ ಮಹಜರು ನಡೆಸಿದ್ದಾರೆ.
ಘಟನೆ ಹಿನ್ನೆಲೆ:
ತುಮಕೂರು ಜಿಲ್ಲೆಯಲ್ಲಿ ಸೋಡಿಯಂ ಬಳಸಿ ಕೃಷಿ ಹೊಂಡದಲ್ಲಿ ಸ್ಫೋಟ ನಡೆಸಿದ ಆರೋಪದ ಮೇಲೆ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್ ಅವರನ್ನು ಬಂಧಿಸಲಾಗಿದೆ. ಪೊಲೀಸರ ವಿಚಾರಣೆಯಲ್ಲಿ ಅವರು ಯೂಟ್ಯೂಬ್‌ನಲ್ಲಿ ಹಣ ಸಂಪಾದಿಸಲು ಎರಡು ಬಾರಿ ಸ್ಫೋಟ ನಡೆಸಿದ್ದೆ ಎಂದು ಒಪ್ಪಿಕೊಂಡಿದ್ದಾರೆ. ಸ್ಫೋಟಕ್ಕೆ ಜಮೀನು ಮಾಲೀಕರ ಅನುಮತಿ ಇರಲಿಲ್ಲ ಮತ್ತು ಯಾವುದೇ ಅಧಿಕೃತ ಅನುಮತಿಯನ್ನು ಪಡೆಯದೆ ಸ್ಫೋಟ ನಡೆಸಲಾಗಿದೆ ಎಂದು ತಿಳಿದುಬಂದಿದೆ.