ಸನ್ ರೈಸರ್ಸ್ ಹೈದರಾಬಾದ್ ತಂಡದ ಮಾಲಕಿ, ಜನಪ್ರಿಯ ಯುವ ಉದ್ಯಮಿ ಕಾವ್ಯಾ ಮಾರನ್ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ, ದಕ್ಷಿಣ ಭಾರತದ ಜನಪ್ರಿಯ ಯುವ ಸಂಗೀತ ನಿರ್ದೇಶಕ ಅನಿರುದ್ಧ್ ರವಿಚಂದರ್ ಜೊತೆ ಹಸೆಮಣೆ ಏರಲು ಸಜ್ಜಾಗಿದ್ದಾರೆ ಎನ್ನಲಾಗುತ್ತಿದೆ.
ಸಂಗೀತ ನಿರ್ದೇಶಕ ಅನಿರುದ್ಧ್ ಮತ್ತು ಕಾವ್ಯಾ ಮಾರನ್ ವಿವಾಹದ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ವದಂತಿಗಳು ಕೇಳಿ ಬಂದಿದೆ. ಆದರೆ ಇವರಿಬ್ಬರ ಮದುವೆ ಬಗ್ಗೆ ಎರಡು ಕುಟುಂಬಗಳು ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ.
‘ಜೈಲರ್’, ‘ವಿಕ್ರಂ’ ಸೇರಿದಂತೆ ಇನ್ನೂ ಹಲವಾರು ಬ್ಲಾಕ್ ಬಸ್ಟರ್ ಸಿನಿಮಾಗಳಿಗೆ ಸಂಗೀತ ನೀಡಿರುವ ಅನಿರುದ್ಧ್ ಇದೀಗ ಕಾವ್ಯ ಮಾರನ್ ಜೊತೆ ಹಸೆಮಣೆ ಏರಲು ಸಜ್ಜಾಗಿದ್ದಾರೆ ಎನ್ನಲಾಗುತ್ತಿದೆ.
ಮೂಲಗಳ ಪ್ರಕಾರ, ಕಾವ್ಯಾ ಮಾರನ್ ಮತ್ತು ಅನಿರುದ್ಧ್ ರವಿಚಂದ್ರನ್ ಕಳೆದ ಕೆಲ ವರ್ಷಗಳಿಂದ ಡೇಟಿಂಗ್ ನಲ್ಲಿದ್ದು ಇದೀಗ ಎರಡು ಕುಟುಂಬಗಳ ಒಪ್ಪಿಗೆ ಪಡೆದು ಹಸೆಮಣೆ ಏರಲು ಸಜ್ಜಾಗಿದ್ದಾರೆ ಎನ್ನಲಾಗುತ್ತಿದೆ. ಅನಿರುದ್ಧ್ ರವಿಚಂದ್ರನ್ ಗೆ ಸದ್ಯ 34 ವಯಸ್ಸಾಗಿದ್ದು, ಕಾವ್ಯಾ ಮಾರನ್ ವಯಸ್ಸು 32.
ಇನ್ನು ಅನಿರುದ್ಧ್ ಅವರು ನಟ ಧನುಷ್ ಅವರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದಾರೆ ಎನ್ನಲಾಗಿದೆ. ಈ ಹಿಂದೆ ಅನಿರುದ್ಧ್ ಮತ್ತು ಗಾಯಕಿ ಆಂಡ್ರಿಯಾ ನಡುವೆ ಸಂಬಂಧ ಇದೆ ಎಂಬ ವದಂತಿಗಳು ಹಬ್ಬಿದ್ದವು. ಆದರೆ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಲಭ್ಯವಿಲ್ಲ.