ವಿಜಯಸಾಕ್ಷಿ ಸುದ್ದಿ, ಗದಗ: ತಾಲೂಕಿನ ತಿಮ್ಮಾಪೂರ ಗ್ರಾಮದ ಶ್ರೀ ಬೀರಲಿಂಗೇಶ್ವರ ಜಾತ್ರಾ ಮಹೋತ್ಸವ ಜ.26ರಂದು ನಡೆಯಲಿದೆ. ಅಂದು ಬೆಳಿಗ್ಗೆ ಶ್ರೀದೇವರಿಗೆ ಪಂಚಾಮೃತ ಅಭಿಷೇಕ ಹಾಗೂ ವಿಶೇಷ ಪೂಜೆ ನೆರವೇರುವುದು.
Advertisement
ಬೆಳಿಗ್ಗೆ 10 ಗಂಟೆಗೆ ದೇವರ ಗಂಗಾ ಪೂಜೆಯ ನಂತರ ಪಲ್ಲಕ್ಕಿ ಮೆರವಣಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಲಿದೆ. ಬಳಿಕ ದೇವಸ್ಥಾನದ ಆವರಣದಲ್ಲಿ ಪೂಜಾರಿಗಳು ಅನೇಕ ಪವಾಡಗಳನ್ನು ಮಾಡಲಿದ್ದಾರೆ. ನಂತರ ಮಹಾ ಪ್ರಸಾದ ನೆರವೇರುವುದು ಎಂದು ಶ್ರೀ ಬೀರಲಿಂಗೇಶ್ವರ ಟ್ರಸ್ಟ್ ಕಮಿಟಿಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.