ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಸಮೀಪದ ಗುಲಗಂಜಿಕೊಪ್ಪ ಗ್ರಾಮದ ಶ್ರೀ ದುಂಡಿಬಸವೇಶ್ವರ ಜಾತ್ರಾ ಮಹೋತ್ಸವ ಆ.18ರಂದು ಜರುಗಲಿದೆ. ಜಾತ್ರಾಮಹೋತ್ಸವಕ್ಕೆ ಈ ವರ್ಷ ನೂತನ ರಥೋತ್ಸವ ನಿರ್ಮಾಣವಾಗಿದೆ.
ಜಾತ್ರಾಮಹೋತ್ಸವದ ನಿಮಿತ್ತ ಪ್ರಾತಃಕಾಲ ಗಂಗಾಪೂಜೆ, ಗಣಪತಿ ಪೂಜೆ, ಪುಣ್ಯಾಹ, ನಾಂದಿ, ನವಗ್ರಹ, ಉಮಾಮಹೇಶ್ವರ ಪೂಜೆ, ಗಣ ಹೋಮ, ನವಗ್ರಹ ಹೋಮ, ಮಹಾಮೃತ್ಯುಂಜಯ ಹೋಮ, ದುರ್ಗಾಹೋಮ, ಜಯಾದಿ ಹೋಮಗಳು ನಡೆಯಲಿವೆ. ನಂತರ ಶ್ರೀ ದುಂಡಿಬಸವೇಶ್ವರನಿಗೆ ಮಹಾರುದ್ರಾಭಿಷೇಕ, ವಿಶೇಷ ಪೂಜೆ, ಪೂರ್ಣಾಹುತಿ, ಮಹಾಮಂಗಳಾರತಿ ನಡೆಯಲಿದೆ.
ಮಧ್ಯಾಹ್ನ 12 ಗಂಟೆಗೆ ಧರ್ಮ ಸಭೆ ನಡೆಯಲಿದ್ದು, ನೊಣವಿನಕೆರೆ ಡಾ. ಶ್ರೀ ಕರಿವೃಷಭದೇಶೀಕೇಂದ್ರ ಶಿವಯೋಗಿಶ್ವರ ಮಹಾಸ್ವಾಮಿಗಳು, ಮುಕ್ತಿಮಂದಿರ ಧರ್ಮಕ್ಷೇತ್ರದ ಶ್ರೀ ವಿಮಲರೇಣುಕ ವೀರಮುಕ್ತಿಮುನಿ ಶಿವಾಚಾರ್ಯ ಮಹಾಸ್ವಾಮಿಗಳು, ಗಂಜಿಗಟ್ಟಿಯ ವೈಜನಾಥ ಶಿವಲಿಂಗೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು, ಕರೇವಾಡಿಮಠದ ಮಳೆಮಲ್ಲಿಕಾರ್ಜುನ ಮಹಾಸ್ವಾಮಿಗಳು, ಹೂವಿನಶಿಗ್ಲಿ ವಿರಕ್ತಮಠದ ಶ್ರೀ ಚನ್ನವೀರ ಮಹಾಸ್ವಾಮಿಗಳ ದಿವ್ಯ ಸಾನ್ನಿಧ್ಯ ವಹಿಸುವರು.
ಸಭೆಯ ಅಧ್ಯಕ್ಷತೆಯನ್ನು ದೇವಸ್ಥಾನ ಸಮಿತಿಯ ಅಧ್ಯಕ್ಷ ಬಸವರಾಜ ಕೊಟಗಿ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲ, ಶಾಸಕ ಡಾ. ಚಂದ್ರು ಲಮಾಣಿ, ಸಂಸದ ಬಸವರಾಜ ಬೊಮ್ಮಾಯಿ, ಮಾಜಿ ಸಂಸದ ಮಂಜುನಾಥ ಕುನ್ನೂರ, ಮಾಜಿ ಶಾಸಕರುಗಳಾದ ಗಂಗಣ್ಣ ಮಹಾಂತಶೆಟ್ಟರ, ಜಿ.ಎಸ್. ಗಡ್ಡದೇವರಮಠ, ರಾಮಣ್ಣ ಲಮಾಣಿ, ರಾಮಕೃಷ್ಣ ದೊಡ್ಡಮನಿ, ಮುಖಂಡರಾದ ವಿಜಯಕುಮಾರ ಗಡ್ಡಿ, ಸುಜಾತಾ ದೊಡ್ಡಮನಿ, ಷಣ್ಮುಖಪ್ಪ ಬಡ್ನಿ, ನಾಗರಾಜ ಮಡಿವಾಳರ, ಉಮೇಶ ಕರಿಗಾರ, ಗ್ರಾ.ಪಂ ಅಧ್ಯಕ್ಷ ಕರಿಯಪ್ಪಗೌಡ ಹೊಸಗೌಡ್ರ, ಉಪಾಧ್ಯಕ್ಷೆ ನಿರ್ಮಲಾ ತಳವಾರ, ಮಂಜನಗೌಡ ಕೆಂಚನಗೌಡ್ರ, ಅಣ್ಣಪ್ಪ ರಾಮಗೇರಿ, ಪದ್ಮರಾಜ ಪಾಟೀಲ, ಸುಶೀಲವ್ವ ಮರಿಲಿಂಗನಗೌಡ್ರ, ಸುಧಾ ಮಾದರ, ನಾಗರತ್ನಾ ಕಡಾರಿ ಮುಂತಾದವರು ಆಗಮಿಸಲಿದ್ದಾರೆ.
ಬೆಳಿಗ್ಗೆ 10 ಗಂಟೆಗೆ ರಕ್ತದಾನ ಶಿಬಿರ ನಡೆಯಲಿದೆ. ಹೂವಿನಶಿಗ್ಲಿ ಹಾಗೂ ಗುಲಗಂಜಿಕೊಪ್ಪದ ಭಕ್ತರಿಂದ ಸಾನ್ನಿಧ್ಯ ವಹಿಸಿದ ಪೂಜ್ಯರಿಗೆ ತುಲಾಭಾರ ಸೇವೆ ನೆರವೇರಲಿದೆ ಎಂದು ಪ್ರಕಟಣೆ ತಿಳಿಸಿದೆ.