ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ತಾಲೂಕಿನ ಬಾಲೇಹೊಸೂರ ಗ್ರಾಮದಲ್ಲಿ ಮಾ.3ರಿಂದ 5ರವರೆಗೆ ಶ್ರೀ ಗಾಳೆಮ್ಮದೇವಿ 3ನೇ ಜಾತ್ರಾ ಮಹೋತ್ಸವ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ಶಿರಹಟ್ಟಿ ಫಕ್ಕೀರೇಶ್ವರ ಸಂಸ್ಥಾನಮಠ ಮತ್ತು ಬಾಲೆಹೊಸೂರಿನ ಶ್ರೀ ಪಕೀರ ದಿಂಗಾಲೇಶ್ವರ ಜಗದ್ಗುರುಗಳು ಹಾಗೂ ಮಹಾಸ್ವಾಮಿಗಳು ಸಂಸ್ಥಾನಮಠ ಕೆರಹು ಹಾಗೂ ಬಾಲೇಹೊಸೂರ ಚಿತ್ರದುರ್ಗದ ಮಾದಾರ ಚನ್ನಯ್ಯ ಗುರುಪೀಠದ ಶ್ರೀ ಬಸವ ಮೂರ್ತಿ ಮಾದಾರ ಚನ್ನಯ್ಯ ಮಹಾಸ್ವಾಮಿಗಳು ಸಾನ್ನಿಧ್ಯ ವಹಿಸುವರು.
ಫೆ.4ರಂದು ಗಣಹೋಮ, ದುರ್ಗಾ ಹೋಮ, ಪ್ರಾಣ ಪ್ರತಿಷ್ಠಾಪನೆ, ಮಂಗಳಾರಾತಿ, ಮಹಾಪ್ರಸಾದ, ಸಂಜೆ 6ಕ್ಕೆ ಶ್ರೀ ದೇವಿಯ ಉತ್ಸವ ಊರಿನ ಪ್ರಮುಖ ಬೀದಿಗಳಲ್ಲಿ ಜರುಗುವುದು. ಫೆ.5ರಂದು ಶ್ರೀದೇವಿಗೆ ಉಡಿ ತುಂಬುವುದು, ಮಹಾಪೂಜೆ ಹಾಗೂ ಮಂಗಳಾರತಿ, ರಾತ್ರಿ 6 ಗಂಟೆಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದೊಂದಿಗೆ ವಿವಿಧ ಕಲಾವಿದರಿಂದ ಜಾನಪದ ಜಾತ್ರೆ ಜರುಗುವುದು ಎಂದು ಪ್ರಕಟಣೆ ತಿಳಿಸಿದೆ.