HomeGadag Newsಜು. 29ರಂದು ಶ್ರೀ ಹಡಪದ ಅಪ್ಪಣ್ಣನವರ ಜಯಂತಿ

ಜು. 29ರಂದು ಶ್ರೀ ಹಡಪದ ಅಪ್ಪಣ್ಣನವರ ಜಯಂತಿ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಗದಗ: ಶ್ರೀ ಹಡಪದ ಅಪ್ಪಣ್ಣನವರ ಜಯಂತಿಯನ್ನು ಜುಲೈ 29ರಂದು ಜಿಲ್ಲಾಡಳಿತ ಭವನದ ಆಡಿಟೋರಿಯಂನಲ್ಲಿ ಅರ್ಥಪೂರ್ಣ ಹಾಗೂ ಅಚ್ಚುಕಟ್ಟಾಗಿ ಆಚರಿಸಲು ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಡಾ. ದುರ್ಗೇಶ್ ಕೆ.ಆರ್. ಅಧಿಕಾರಿಗಳಿಗೆ ಸೂಚನೆ ನೀಡಿದರು.

ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಯಂತಿಯ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲಾ ಮಟ್ಟದ ಜೊತೆಗೆ ತಾಲೂಕು ಮಟ್ಟದಲ್ಲೂ ಜಯಂತಿಯನ್ನು ಆಚರಿಸಲು ಕ್ರಮ ಕೈಗೊಳ್ಳಬೇಕು. ಶಾಲೆ, ಕಾಲೇಜು, ಗ್ರಾಮ ಪಂಚಾಯಿತಿ ಹಾಗೂ ಸರ್ಕಾರಿ ಕಚೇರಿಗಳಲ್ಲೂ ಶ್ರೀ ಹಡಪದ ಅಪ್ಪಣ್ಣನವರ ಜಯಂತಿ ಆಚರಿಸುವಂತೆ ಸಂಬಂಧಿಸಿದ ಇಲಾಖೆಗಳು ಅಗತ್ಯ ಕ್ರಮ ವಹಿಸಬೇಕು ಎಂದು ನಿರ್ದೇಶನ ನೀಡಿದರು.

ಜಯಂತಿ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಮಾಜದ ಹಿರಿಯರನ್ನು ಹಾಗೂ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ಸಮಾಜದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು. ಕಾರ್ಯಕ್ರಮದ ಯಶಸ್ವಿ ಆಯೋಜನೆಗಾಗಿ ಎಲ್ಲ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.

ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆ ಮುದ್ರಣ, ವೇದಿಕೆ ವ್ಯವಸ್ಥೆ, ಉಪನ್ಯಾಸಕರ ಆಯ್ಕೆ, ಊಟೋಪಹಾರ, ಬ್ಯಾನರ್ ಅಳವಡಿಕೆ ಸೇರಿದಂತೆ ಅಗತ್ಯ ಸಿದ್ಧತೆಗಳನ್ನು ಸಮಯಕ್ಕೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಸಮಾಜದ ಮುಖಂಡರು ಹಾಗೂ ಪದಾಧಿಕಾರಿಗಳು ವಿವಿಧ ಸಲಹೆ-ಸೂಚನೆಗಳನ್ನು ನೀಡಿದರು.

ಸಭೆಯಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ಬಿ. ಮಸನಾಯಕ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಎಂ.ಎನ್. ತುಂಬರಮಟ್ಟಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಬಸವರಾಜ ವಿ. ಬಳ್ಳಾರಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಮಾಜದ ಮುಖಂಡರು ಉಪಸ್ಥಿತರಿದ್ದರು.

“ಶ್ರೀ ಹಡಪದ ಅಪ್ಪಣ್ಣನವರ ಜಯಂತಿಯನ್ನು ಜಿಲ್ಲೆ ಮತ್ತು ತಾಲೂಕು ಮಟ್ಟದಲ್ಲಿ ಅರ್ಥಪೂರ್ಣವಾಗಿ, ವ್ಯವಸ್ಥಿತವಾಗಿ ಹಾಗೂ ಜನಸ್ಪಂದನೆಯೊಂದಿಗೆ ಆಚರಿಸಬೇಕು.”

– ಡಾ. ದುರ್ಗೇಶ್ ಕೆ.ಆರ್., ಅಪರ ಜಿಲ್ಲಾಧಿಕಾರಿ

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img