ವಿಜಯಸಾಕ್ಷಿ ಸುದ್ದಿ, ಗದಗ: ಸಮೀಪದ ತಿಮ್ಮಾಪೂರ ಗ್ರಾಮದ ಶ್ರೀ ಮೈಲಾರಲಿಂಗೇಶ್ವರ ಜಾತ್ರಾ ಮಹೋತ್ಸವವು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು.
ಪಲ್ಲಕ್ಕಿ ಮಹೋತ್ಸವದಲ್ಲಿ ಭಕ್ತರು ದೀಡನಮಸ್ಕಾರ ಹಾಕುವುದರ ಮೂಲಕ ಏಳು ಕೋಟಿ ಏಳು ಕೋಟಿ ಎಂದು ಕೂಗುತ್ತಾ ಸಾಗಿದರು. ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ದೇವಸ್ಥಾನಕ್ಕೆ ಹೂಮಾಲೆ ಹಾಗೂ ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು.
ಬೆಳಿಗ್ಗೆ ಶ್ರೀ ಮೈಲಾರಲಿಂಗೇಶ್ವರ ದೇವರಿಗೆ ಪಂಚಾಮೃತ ಅಭಿಷೇಕ, ದೇವರಿಗೆ ಚಿನ್ನ-ಬೆಳ್ಳಿ ಆಭರಣಗಳಿಂದ ಅಲಂಕಾರ ಮಾಡಿ ಪೂಜೆ ಸಲ್ಲಿಸಲಾಯಿತು. ನೂರಾರು ಭಕ್ತರು ಮಹಾ ಪ್ರಸಾದ ಸ್ವೀಕರಿಸಿ ದೇವರ ಕೃಪೆಗೆ ಪಾತ್ರರಾದರು.



