ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಪಟ್ಟಣದ ಸವಣೂರ ರಸ್ತೆಯಲ್ಲಿರುವ ತಿರುಪತಿ ತದ್ರೂಪ ಶ್ರೀ ವೆಂಕಟೇಶ್ವರ ದೇವಸ್ಥಾನದಲ್ಲಿ ಮೇ.18ರಂದು ಶ್ರೀ ಶ್ರೀನಿವಾಸ ಕಲ್ಯಾಣ ಮಹೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
Advertisement
ಬೆಳಿಗ್ಗೆ 6.30ಕ್ಕೆ ಕ್ಷೀರಾಭಿಷೇಕ, 7.30ಕ್ಕೆ ತುಳಸಿ ಅರ್ಚನೆ, 8ಕ್ಕೆ ಶ್ರೀ ಲಕ್ಷ್ಮಿ ನಾರಾಯಣ ಮ್ತು ನವಗ್ರಹ ಹೋಮ ನೆರವೇರುವುದು. ಬೆಳಿಗ್ಗೆ 11.30ಕ್ಕೆ ಶ್ರೀ ಶ್ರೀನಿವಾಸ ಕಲ್ಯಾಣ ಮಹೋತ್ಸವ ಕಾರ್ಯಕ್ರಮ, ಮಧ್ಯಾಹ್ನ 1ಕ್ಕೆ ಮಹಾಮಂಗಳಾರತಿ, ಪ್ರಸಾದ, ಸಂಜೆ 6ಕ್ಕೆ ಪಲ್ಲಕ್ಕಿ ಸೇವೆ ಜರುಗುವುದು ಎಂದು ದೇವಸ್ಥಾನ ಟ್ರಸ್ಟ್ ಪ್ರಕಟಣೆಯಲ್ಲಿ ತಿಳಿಸಿದೆ.