ವಿಜಯಸಾಕ್ಷಿ ಸುದ್ದಿ, ಗದಗ: ವಿಶ್ವ ಹಿಂದೂ ಪರಿಷತ್ತಿನ ಜಿಲ್ಲಾಧ್ಯಕ್ಷರಾಗಿ ಜವಾಬ್ದಾರಿ ನಿಭಾಯಿಸಿದ ಶ್ರೀಧರ್ ಕುಲಕರ್ಣಿ ಅವರಿಗೆ ವಿಭಾಗ ಪ್ರಮುಖ ಹಾಗೂ ಪ್ರಾಂತ ಜವಾಬ್ದಾರಿಯನ್ನು ವಿಶ್ವ ಹಿಂದೂ ಪರಿಷತ್ ಕರ್ನಾಟಕ ಉತ್ತರ ಪ್ರಾಂತ ಬೈಠಕ್‌ನಲ್ಲಿ ಘೋಷಣೆ ಮಾಡಲಾಗಿದೆ.
ಇದುವರೆಗೆ ಜಿಲ್ಲಾ ವಿಶ್ವ ಹಿಂದೂ ಪರಿಷತ್ತಿನ ಕಾರ್ಯದರ್ಶಿ ಎಂದು ಕಾರ್ಯನಿರ್ವಹಿಸುತ್ತಿದ್ದ ಗದುಗಿನ ಮಾರುತಿ ಪವಾರರನ್ನು ವಿಶ್ವ ಹಿಂದೂ ಪರಿಷತ್ ಜಿಲ್ಲಾ ಅಧ್ಯಕ್ಷ ಎಂದು ಬಾಗಲಕೋಟೆಯಲ್ಲಿ ಇತ್ತೀಚೆಗೆ ನಡೆದ ವಿಶ್ವ ಹಿಂದೂ ಪರಿಷತ್ ಪ್ರಾಂತ ಬೈಠಕ್‌ನಲ್ಲಿ ಘೋಷಣೆ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.



