ವಿಜಯಸಾಕ್ಷಿ ಸುದ್ದಿ, ಗದಗ: ರಾಜ್ಯ ಎಸ್ಸಿ/ಎಸ್ಟಿ ನಕಲಿ ಜಾತಿ ಪ್ರಮಾಣ ಪತ್ರಗಳ ತಡೆ ಸಮಿತಿಯ ಗದಗ ಜಿಲ್ಲಾ ಘಟಕದ ನೂತನ ಜಿಲ್ಲಾಧ್ಯಕ್ಷರಾಗಿ ಯುವ ಹೋರಾಟಗಾರ ಶ್ರೀಕಾಂತ ಸಿ. ಪೂಜಾರ ಅವರನ್ನು ನೇಮಕ ಮಾಡಲಾಗಿದೆ.
ಈ ಕುರಿತು ಸಮಿತಿಯ ರಾಜ್ಯಾಧ್ಯಕ್ಷ ಶ್ರವಣಕುಮಾರ ಡಿ. ನಾಯಕ ಆದೇಶ ಹೊರಡಿಸಿದ್ದು, ಸಂಘಟನೆಯನ್ನು ತಳಮಟ್ಟದಿಂದ ಮತ್ತಷ್ಟು ಬಲಪಡಿಸುವ ಜತೆಗೆ ಎಸ್ಸಿ/ಎಸ್ಟಿ ಸಮುದಾಯಗಳ ಹೆಸರಿನಲ್ಲಿ ನಡೆಯುವ ನಕಲಿ ಜಾತಿ ಪ್ರಮಾಣ ಪತ್ರಗಳ ದಂಧೆ ವಿರುದ್ಧ ಕಾನೂನುಬದ್ಧ ಹೋರಾಟ ನಡೆಸುವಂತೆ ಸೂಚಿಸಿದ್ದಾರೆ.
ಸಮಿತಿಯ ನಿಯಮಾವಳಿಗಳಿಗೆ ಬದ್ಧರಾಗಿ ಕಾರ್ಯನಿರ್ವಹಿಸಿ, ಅರ್ಹ ಫಲಾನುಭವಿಗಳಿಗೆ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಸಮಾಜಮುಖಿ ಸೇವೆ ಸಲ್ಲಿಸುವಂತೆ ನೂತನ ಜಿಲ್ಲಾಧ್ಯಕ್ಷರಿಗೆ ಅವರು ಶುಭ ಹಾರೈಸಿದ್ದಾರೆ.



