ಕಿಸ್ ಸಿನಿಮಾದ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿಕೊಟ್ಟ ನಟಿ ಶ್ರೀಲೀಲಾ ಸದ್ಯ ಟಾಲಿವುಡ್ ಚಿತ್ರರಂಗದಲ್ಲಿ ಸದ್ದು ಮಾಡುತ್ತಿದ್ದಾರೆ. ಬ್ಯಾಕ್ ಟು ಬ್ಯಾಕ್ ತೆಲುಗು ಸಿನಿಮಾಗಳಿಗೆ ಬಣ್ಣ ಹಚ್ಚುತ್ತಿರುವ ನಟಿ ಸದ್ಯ ಪುಷ್ಪ 2 ಸಿನಿಮಾದ ಸ್ಪೆಷಲ್ ಹಾಡಿಗೆ ಸೊಂಟ ಬಳುಕಿಸಿದ್ದಾರೆ. ‘ಕಿಸ್ಸಿಕ್’ ಹಾಡಿಗೆ ಸೊಂಟ ಬಳುಕಿಸುವ ಮೂಲಕ ಪಡ್ಡೆಹುಡುಗರ ನಿದ್ದೆ ಕದ್ದ ಶ್ರೀಲೀಲಾರನ್ನು ನಟ ಅಲ್ಲು ಅರ್ಜುನ್ ಹಾಡಿ ಹೊಗಳಿದ್ದಾರೆ.
ಪುಷ್ಪ 2 ಸಿನಿಮಾದ ಪ್ರಚಾರದಲ್ಲಿ ಭಾಗಿಯಾಗಿದ್ದ ನಟ ಅಲ್ಲು ಅರ್ಜುನ್, ಶ್ರೀಲೀಲಾಗೆ ಚಿತ್ರರಂಗದಲ್ಲಿ ಉತ್ತಮ ಭವಿಷ್ಯವಿದೆ. ಶ್ರೀಲೀಲಾ ಕ್ಯೂಟ್, ಪ್ರತಿಭಾನ್ವಿತ ನಟಿ. ತೆಲುಗು ಹೆಣ್ಣು ಮಕ್ಕಳಿಗೆ ಆಕೆ ಸ್ಫೂರ್ತಿ ಎಂದಿದ್ದಾರೆ.
ಸಾಕಷ್ಟು ನಿರೀಕ್ಷೆ ಮೂಡಿಸಿರುವ ಪುಷ್ಪ 2 ಸಿನಿಮಾ ಇಂದು ಬಹುಭಾಷೆಗಳಲ್ಲಿ ರಿಲೀಸ್ ಆಗಲಿದೆ. ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ, ಶ್ರೀಲೀಲಾ, ಡಾಲಿ, ಅನಸೂಯ, ಫಹಾದ್ ಫಾಸಿಲ್ ಸೇರಿದಂತೆ ಅನೇಕರು ನಟಿಸಿದ್ದು ರಿಲೀಸ್ ಗೂ ಮುನ್ನವೇ ಸಿನಿಮಾ ಭರ್ಜರಿ ಕಲೆಕ್ಷನ್ ಮಾಡಿದೆ. ತೆಲಂಗಾಣ, ಆಂಧ್ರ ಪ್ರದೇಶ, ಬೆಂಗಳೂರಿನಲ್ಲಿ ಡಿಸೆಂಬರ್ 4ರ ರಾತ್ರಿಯಿಂದಲೇ ಪುಷ್ಪ 2 ಹವಾ ಶುರುವಾಗಿದೆ. ಸುಕುಮಾರ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಮೈತ್ರಿ ಮೂವೀ ಮೇಕರ್ಸ್ ಈ ಚಿತ್ರಕ್ಕೆ ಬಂಡವಾಳ ಹೂಡಿದೆ.