ಮೂರು ವರ್ಷಗಳ ಬಳಿಕ ಕನ್ನಡಕ್ಕೆ ಶ್ರೀಲೀಲಾ ಎಂಟ್ರಿ: ರೆಡ್ಡಿ ಮಗನ ಜೊತೆ ನಟಿಯ ಡ್ಯುಯೆಟ್

0
Spread the love

ಕಿಸ್‌ ಸಿನಿಮಾದ ಮೂಲಕ ಕನ್ನಡ ಚಿತ್ರರಂಗದಲ್ಲಿ ಭರವಸೆ ಮೂಡಿಸಿ ಸದ್ಯ ಪರಭಾಷೆಯಲ್ಲೂ ಸಖತ್‌ ಡಿಮ್ಯಾಂಡ್‌ ಕ್ರಿಯೇಟ್‌ ಮಾಡ್ತಿರುವ ನಟಿ ಶ್ರೀಲೀಲಾ. ಸೌತ್‌ ನಲ್ಲಿ ಭಾರೀ ಬೇಡಿಕೆ ಕಾಯ್ದುಕೊಂಡಿರುವ ಶ್ರೀಲೀಲಾ ಇದೀಗ 3 ವರ್ಷಗಳ ಬಳಿಕ ಕನ್ನಡಕ್ಕೆ ಬರುತ್ತಿದ್ದಾರೆ. ಹೌದು. ಜನಾರ್ದನ ರೆಡ್ಡಿ ಮಗ ಕಿರೀಟಿಗೆ ನಾಯಕಿಯಾಗಿ ‘ಜೂನಿಯರ್’ ಚಿತ್ರದಲ್ಲಿ ಶ್ರೀಲೀಲಾ ನಟಿಸಿದ್ದು ಸದ್ಯ ಜೂನಿಯರ್‌ ಸಿನಿಮಾದ ಮೊದಲ ಸಾಂಗ್ ರಿಲೀಸ್ ಆಗಿದೆ.

Advertisement

ಜೂನಿಯರ್‌ ಸಿನಿಮಾದ ಮೊದಲ ಹಾಡು ಅದ್ಧೂರಿಯಾಗಿ ರಿಲೀಸ್ ಆಗಿದೆ. ‘ಲೆಟ್ಸ್ ಲಿವ್ ದಿ ಮೂಮೆಂಟ್’ ಎಂಬ ರೊಮ್ಯಾಂಟಿಕ್ ಹಾಡು ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ರಿಲೀಸ್ ಆಗಿದೆ. ಶ್ರೀಲೀಲಾ ಸಖತ್ತಾಗಿ ಕಿರೀಟಿ ಜೊತೆ ಕುಣಿದು ಕುಪ್ಪಳಿಸಿದ್ದಾರೆ. ಈ ಹಾಡಿಗೆ ಅಭಿಮಾನಿಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು ಇದೇ ಜುಲೈ 18ಕ್ಕೆ ಸಿನಿಮಾ ರಿಲೀಸ್‌ ಆಗಲಿದೆ.

‘ಮಾಯಾಬಜಾರ್’ ಸಿನಿಮಾ ಖ್ಯಾತಿಯ ರಾಧಾಕೃಷ್ಣ ರೆಡ್ಡಿ ನಿರ್ದೇಶನದಲ್ಲಿ ‘ಜೂನಿಯರ್’ ಸಿನಿಮಾ ತಯಾರಾಗಿದೆ. ದಕ್ಷಿಣ ಭಾರತದ ಖ್ಯಾತ ನಿರ್ಮಾಣ ಸಂಸ್ಥೆ ವರಾಹಿ ಫಿಲ್ಮಂ ಪ್ರೊಡಕ್ಷನ್ ಕಿರೀಟಿ ಮೊದಲ ಚಿತ್ರಕ್ಕೆ ಬಂಡವಾಳ ಹೂಡಿದ್ದು, ಬಿಗ್ ಬಜೆಟ್‌ನಲ್ಲಿ ಸಿನಿಮಾ ನಿರ್ಮಾಣ ಚಿತ್ರ ಮೂಡಿಬಂದಿದೆ.

ಶ್ರೀಲೀಲಾ, ಕಿರೀಟಿ ಜೊತೆ ರವಿಚಂದ್ರನ್, ಜೆನಿಲಿಯಾ ರಿತೇಶ್ ದೇಶ್‌ಮುಖ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ‘ಜೂನಿಯರ್’ ಸಿನಿಮಾದ ತಾಂತ್ರಿಕ ಬಳಗ ಶ್ರೀಮಂತಿಕೆಯಿಂದ ಕೂಡಿದೆ. ದಕ್ಷಿಣ ಭಾರತದ ಖ್ಯಾತ ಸಂಗೀತ ನಿರ್ದೇಶಕ ರಾಕ್‌ಸ್ಟಾರ್ ಖ್ಯಾತಿಯ ದೇವಿಶ್ರೀ ಪ್ರಸಾದ್ ಸಂಗೀತ, ‘ಬಾಹುಬಲಿ’ ಸಿನಿಮಾ ಖ್ಯಾತಿಯ ಕಣ್ಣು ಕೆ ಸೆಂಥಿಲ್ ಕುಮಾರ್ ಕ್ಯಾಮೆರಾ ನಿರ್ದೇಶನ ಮಾಡಿದ್ದಾರೆ.


Spread the love

LEAVE A REPLY

Please enter your comment!
Please enter your name here