ಪ್ರವಾಸಿಗರ ಗಮನಕ್ಕೆ: ಶೃಂಗೇರಿ-ಹೊರನಾಡು ರಸ್ತೆ ಸಂಚಾರ ಬಂದ್; ಕಾರಣ ಇಲ್ಲಿದೆ!

0
Spread the love

ಚಿಕ್ಕಮಗಳೂರು:- ಶೃಂಗೇರಿಯಿಂದ ಹೊರನಾಡಿಗೆ ಹೋಗುವ ಮುಖ್ಯ ರಸ್ತೆ ಬಂದ್​ ಆಗಿದೆ.

Advertisement

ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ಅವಾಂತರಗಳನ್ನೇ ಸೃಷ್ಟಿಸಿ ಜೀವ ಭಯವನ್ನ ಮೂಡಿಸಿದೆ. ನೋಡ ನೋಡುತ್ತಿದ್ದಂತೆ ಮನೆಗಳು ಕುಸಿದು ಬೀಳುತ್ತಿವೆ. ತುಂಗ, ಹೇಮಾವತಿ ಆರ್ಭಟಕ್ಕೆ ಜನ ಕಂಗಾಲಾಗಿದ್ದಾರೆ.

ಸದ್ಯ ಮುಂದುವರೆದ ಭಾರೀ ಮಳೆ‌ ಹಿನ್ನೆಲೆ ಶೃಂಗೇರಿಯಿಂದ ಹೊರನಾಡಿಗೆ ಹೋಗುವ ಮುಖ್ಯ ರಸ್ತೆ ಬಂದ್​ ಆಗಿದೆ. ಸಂಪೂರ್ಣ ರಸ್ತೆ ಸಂಪರ್ಕ ಕಡಿತವಾಗಿದೆ. ಹೀಗಾಗಿ ವಾಹನ ಸವಾರರಿಗೆ ಹಳುವಳ್ಳು ಮಾರ್ಗವಾಗಿ ಸಂಚಾರ ಮಾಡಲು‌ ಸೂಚನೆ ನೀಡಲಾಗಿದೆ.

ಕಳಸ ಪಟ್ಟಣಕ್ಕೆ ಸಂಪರ್ಕಿಸುವ ಮತ್ತೊಂದು ರಸ್ತೆಯೂ ಬಂದ್ ಆಗಿದೆ. ಬಿಳಾಲುಕೊಪ್ಪದಿಂದ ಬಸರೀಕಟ್ಟೆಗೆ ಹೋಗುವ ರಸ್ತೆಯಲ್ಲಿ ನೀರು ಹರಿಯುತ್ತಿದ್ದು, ಶೃಂಗೇರಿಯಿಂದ ಹೊರನಾಡಿಗೆ ಹೋಗುವ ಮುಖ್ಯ ರಸ್ತೆ ಬಂದ್ ಆಗಿದೆ. ಮಧ್ಯಾಹ್ನ ಬಳಿಕ‌ ಕಳಸ‌, ಕುದುರೆಮುಖ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರೀ ಮಳೆ ಸುರಿಯುತ್ತಿದೆ.


Spread the love

LEAVE A REPLY

Please enter your comment!
Please enter your name here