ವಿಜಯಸಾಕ್ಷಿ ಸುದ್ದಿ, ಗದಗ: ತಾಲೂಕಿನ ಕಣವಿ ಸರ್ಕಾರಿ ಪ್ರೌಢಶಾಲೆಯಲ್ಲಿ ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ, ಭಾರತೀಯ ವಿಜ್ಞಾನ ಸಂಸ್ಥೆ ಬೆಂಗಳೂರು ಹಾಗೂ ರಾಷ್ಟ್ರೀಯ ವಿಜ್ಞಾನ ಮತ್ತು ತಂತ್ರಜ್ಞಾನ ಸಂವಹನ ಮಂಡಳಿ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಭಾರತ ಸರ್ಕಾರ ಮತ್ತು ಜಿಲ್ಲಾ ಪಂಚಾಯಿತಿ ಗದಗ ಇವರ ಸಹಯೋಗದಲ್ಲಿ ಶ್ರೀನಿವಾಸ ರಾಮಾನುಜಮ್ ಅವರ ಜನ್ಮದಿನದ ಅಂಗವಾಗಿ ರಾಷ್ಟಿçÃಯ ಗಣಿತ ದಿನಾಚರಣೆ ಕಾರ್ಯಕ್ರಮ ಜರುಗಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಣವಿ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ಶಶಿಧರ ಬಡಿಗೇರ ವಹಿಸಿದ್ದರು. ನಿವೃತ್ತ ಗಣಿತ ಶಿಕ್ಷಕ ಎಂ.ಎಸ್. ಪೂಜಾರ್ ಉಪನ್ಯಾಸವನ್ನು ನೀಡಿದರು. ರಾಷ್ಟಿçÃಯ ಗಣಿತ ದಿನದ ಪ್ರಯುಕ್ತ ಮಕ್ಕಳ ಸಂತೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ವಿಶೇಷವಾಗಿತ್ತು.
ಮುಖ್ಯ ಅಥಿತಿಗಳಾಗಿ ವಿಜ್ಞಾನ ವಿಷಯ ಪರಿವೀಕ್ಷಕರಾದ ಬಂಡಿವಡ್ಡರ್, ಜಿಲ್ಲಾ ಪಂಚಾಯಿತಿ (ಎನ್. ಆರ್.ಡಿ.ಎಂ.ಎಸ್ ಶಾಖೆ) ಮಂಜುನಾಥ ಎಸ್.ತೋಟದ, ಶಿಕ್ಷಕ ವೃಂದ ಹಾಗೂ ಮಕ್ಕಳು ಭಾಗವಹಿಸಿದ್ದರು.