ಬೆಂಗಳೂರು:- ಶ್ರೀರಾಮುಲುಗೆ ಕಾಂಗ್ರೆಸ್ ಪಕ್ಷಕ್ಕೆ ಬರುವಂತೆ ಯಾವುದೇ ಆಹ್ವಾನ ನೀಡಿಲ್ಲ ಎಂದು DCM ಡಿಕೆ ಶಿವಕುಮಾರ್ ಸ್ಪಷ್ಟನೆ ಕೊಟ್ಟಿದ್ದಾರೆ.
ಕಾಂಗ್ರೆಸ್ ಪಕ್ಷಕ್ಕೆ ಮಾಜಿ ಸಚಿವ ಶ್ರೀರಾಮುಲು ಅವರಿಗೆ ಆಹ್ವಾನ ನೀಡಿದ ಬಗ್ಗೆ ಜನಾರ್ದನ ರೆಡ್ಡಿಯ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಡಿ.ಕೆ. ಶಿವಕುಮಾರ್, ನಾನು ಶ್ರೀರಾಮುಲು ಅವರನ್ನು ಭೇಟಿಯಾಗಿಲ್ಲ, ಅವರಿಗೆ ಯಾವುದೇ ಆಹ್ವಾನ ನೀಡಿಲ್ಲ. ವಿಧಾನಸಭೆ ಚುನಾವಣೆಗೂ ಮೊದಲು ನಾನು ಪಕ್ಷಕ್ಕೆ ಬರಲು ಕೇಳಿದ್ದೆ. ಆಗ ಶ್ರೀರಾಮುಲು ಅವರು ನಾನು ಬಿಜೆಪಿಯಲ್ಲೇ ಇರುತ್ತೇನೆ ಎಂದು ಹೇಳಿದ್ದರು. ಆಗ ಶ್ರೀರಾಮುಲು ಮಾತ್ರವಲ್ಲ 50 ಶಾಸಕರನ್ನು ಕೂಡ ಸಂಪರ್ಕ ಮಾಡಿದ್ದೆ ಎಂದು ಹೇಳಿದ್ದಾರೆ.
ವಿಧಾನಸಭಾ ಚುನಾವಣೆಗೂ ಮುನ್ನ ನಾನು ಬೇರೆ ಶಾಸಕರನ್ನು ಸಂಪರ್ಕಿಸಿದ್ದೆ. ಈಗ ನಾನು ಯಾರನ್ನೂ ಸಂಪರ್ಕ ಮಾಡಿಲ್ಲ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ಅವರು ಬಾಯಿಚಪಲಕ್ಕೆ ಮಾತಾಡಿದರೆ ಅದಕ್ಕೆ ನಾನು ಉತ್ತರ ಕೊಡುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿಕೆ ನೀಡಿದ್ದಾರೆ.