ಗಣಪತಿ ವಿಸರ್ಜನಾ ಮೆರವಣಿಗೆಯಲ್ಲಿ ಶ್ರೀರಾಮುಲು ಭರ್ಜರಿ ಡ್ಯಾನ್ಸ್!

0
Spread the love

ಬಳ್ಳಾರಿ:- ಗಣಪತಿ ವಿಸರ್ಜನಾ ಮೆರವಣಿಗೆಯಲ್ಲಿ ಬಿಜೆಪಿ ಮುಖಂಡ ಬಿ. ಶ್ರೀರಾಮುಲು ಭರ್ಜರಿ ಡ್ಯಾನ್ಸ್ ಮಾಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಈ ವಿಡಿಯೋ ಭಾರೀ ವೈರಲ್ ಆಗಿದೆ.

Advertisement

ಹಿಂದೂ ಮಹಾಸಭೆಯ ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ಯುವಕರ ಜೊತೆ ಮಾಜಿ ಸಚಿವ ಶ್ರೀರಾಮುಲು ಭರ್ಜರಿ ಸ್ಟೆಪ್ಸ್ ಹಾಕಿದ್ದಾರೆ. ಬಳ್ಳಾರಿಯ ಸೆಂಟ್ರನರಿ ಹಾಲ್ ನಲ್ಲಿ ಪ್ರತಿಷ್ಠಾಪನೆ ಮಾಡಿದ ಹಿಂದೂ ಮಹಾಸಭೆಯ ಗಣಪತಿಯನ್ನು ಕಳೆದ ಏಳು ದಿನಗಳಿಂದ ಶ್ರದ್ಧಾ ಭಕ್ತಿಯಿಂದ ಪೂಜೆ ಪುನಸ್ಕಾರ ಮಾಡಲಾಯಿತು.

ಇಂದು ಸಂಜೆ ಬಳ್ಳಾರಿ ನಗರದ ಪ್ರಮುಖ ಬೀದಿಯಲ್ಲಿ ಮೆರವಣಿಗೆ ಮೂಲಕ ವಿಸರ್ಜನೆಗೆ ಕರೆದುಕೊಂಡು ಹೋಗುವ ವೇಳೆ ಶ್ರೀರಾಮುಲು, ಮಾಜಿ ಶಾಸಕ ಸೋಮಶೇಖರ್ ರೆಡ್ಡಿ ಶಾಸಕ ಭರತ್ ರೆಡ್ಡಿ ಭಾಗವಹಿಸಿದ್ರು. ಈ ವೇಳೆ ಅಭಿಮಾನಿಗಳ ಒತ್ತಾಸೆಗೆ ಶ್ರೀರಾಮುಲು‌ ಡಿಜೆ ಸದ್ದಿಗೆ ಭರ್ಜರಿ ಹೆಜ್ಜೆ ಹಾಕಿದ್ದಾರೆ.

ಅಲ್ಲದೇ ಇದೇ ವೇಳೆ ಯುವಕರು, ಮಹಿಳೆಯರು ಕೂಡ ಭರ್ಜರಿ ಸ್ಟೆಪ್ಸ್ ಹಾಕಿದ್ದಾರೆ.


Spread the love

LEAVE A REPLY

Please enter your comment!
Please enter your name here