ವಿಜಯಸಾಕ್ಷಿ ಸುದ್ದಿ, ಗದಗ : ಇತಿಹಾಸ ಹಾಗೂ ಪರಂಪರೆಯಲ್ಲಿ ಜಗತ್ತಿನಲ್ಲಿಯೇ ಮುಂದಿರುವ ಭಾರತ ದೇಶದ ಸಂಸ್ಕಾರವನ್ನು ಉಳಿಸಿ, ಮುಂದುವರೆಸಿಕೊಂಡು ಹೋಗುವದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಹಾವೇರಿ-ಗದಗ ಸಂಸದ ಹಾಗೂ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ನಗರದ ಹಳೇ ಸರಾಫ್ ಬಜಾರದ ಶ್ರೀ ಜಗದಂಬಾ ದೇವಸ್ಥಾನದ ಸಹಸ್ರಾರ್ಜುನ ಸಮುದಾಯ ಭವನದ ಬಾಸ್ಕರಸಾ ಪವಾರ ಸಭಾಂಗಣದ ದಸರಾ ದರಬಾರ ವೇದಿಕೆಯಲ್ಲಿ ಜರುಗಿದ `ನಮ್ಮೂರು ದಸರಾ-2024′ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿ, ಧಾರ್ಮಿಕ ಆಚರಣೆಯಲ್ಲಿ ಎಸ್‌ಎಸ್‌ಕೆ ಸಮಾಜವು ತನ್ನದೇ ಆದ ಇತಿಹಾಸವನ್ನು ಹೊಂದಿದೆ. ದಸರಾ ಹಬ್ಬವನ್ನು ಅದ್ದೂರಿಯಾಗಿ ಆಚರಿಸಿಕೊಂಡು ಬರುತ್ತಿರುವ ಸಮಾಜ ಬಾಂಧವರಿಗೆ ಜಗನ್ಮಾತೆ ಯಶಸ್ಸು ನೀಡಲಿ ಎಂದು ಹಾರೈಸಿದರು.
ಇದಕ್ಕೂ ಮುಂಚೆ ಅವರು ಜಗದಂಬಾ ದೇವಿ ಹಾಗೂ ತುಳಜಾಭವಾನಿ ದೇವಿಯ ದರ್ಶನ ಪಡೆದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗದಗ ಎಸ್.ಎಸ್.ಕೆ ಸಮಾಜ ಪಂಚ ಕಮಿಟಿ ಅಧ್ಯಕ್ಷ ಫಕೀರಸಾ ಬಾಂಡಗೆ ವಹಿಸಿದ್ದರು. ವೇದಿಕೆ ಮೇಲೆ ಬಿಜೆಪಿ ಜಿಲ್ಲಾಧ್ಯಕ್ಷ ರಾಜು ಕುರಡಗಿ, ಪಂಚ ಕಮಿಟಿಯ ಉಪಾಧ್ಯಕ್ಷ ರಾಜು ಬದಿ, ಗೌರವ ಕಾರ್ಯದರ್ಶಿ ವಿನೋದ ಶಿದ್ಲಿಂಗ, ಕಾರ್ಯದರ್ಶಿ ರವಿ ಶಿದ್ಲಿಂಗ, ದಸರಾ ಕಮಿಟಿಯ ಚೇರಮನ್ ವಿಷ್ಣುಸಾ ಶಿದ್ಲಿಂಗ ಉಪಸ್ಥಿತರಿದ್ದರು. ಬಲರಾಮ ಬಸವಾ ಪ್ರಾಸ್ತಾವಿಕವಾಗಿ ಮಾತನಾಡಿದರು.
ಈ ಸಂದರ್ಭದಲ್ಲಿ ಪಂಚ ಕಮಿಟಿಯ ಸದಸ್ಯರಾದ ಎನ್.ಆರ್. ಖಟವಟೆ, ವಿಶ್ವನಾಥಸಾ ಖಟವಟೆ, ಸುರೇಶಕುಮಾರ ಬದಿ, ಮಾರುತಿ ಪವಾರ, ಶ್ರೀನಿವಾಸ ಬಾಂಡಗೆ, ಶ್ರೀಕಾಂತ ಖಟವಟೆ, ಮೋತಿಲಾಲಸಾ ಪೂಜಾರಿ, ಪರಶುರಾಮಸಾ ಬದಿ, ಗಣಪತಸಾ ಜಿತೂರಿ, ವಿನೋಧ ಬಾಂಡಗೆ, ಪ್ರಕಾಶ ಬಾಕಳೆ, ಗಂಗಾಧರ ಹಬೀಬ, ಅಂಬಾಸಾ ಖಟವಟೆ, ವಿಶ್ವನಾಥ ಸೂಳಂಕಿ, ಸಾಗರ ಪವಾರ, ಸತೀಶ ದೇವಳೆ, ಶ್ರೀಕಾಂತ ಬಾಕಳೆ, ಮೋಹನಸಾ ಪವಾರ, ನಾಗರಾಜ ಖೋಡೆ, ಉಮಾಬಾಯಿ ಬೇವಿನಕಟ್ಟಿ, ಸ್ನೇಹಲತಾ ಕಬಾಡಿ ಮುಂತಾದವರು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಜಿ.ಎನ್. ಹಬೀಬ ನಿರೂಪಿಸಿದರು. ಅನಿಲ್ ಖಟವಟೆ ವಂದಿಸಿದರು.
ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ ಮಾತನಾಡಿ, ಎಸ್‌ಎಸ್‌ಕೆ ಸಮಾಜ ಬಾಂಧವರು ಹಲವಾರು ವರ್ಷಗಳಿಂದ ದಸರಾ ಹಬ್ಬವನ್ನು ಅದ್ದೂರಿಯಾಗಿ ಆಚರಿಸಿಕೊಂಡು ಬರುತ್ತಿದ್ದಾರೆ. ದಸರಾ ಹಬ್ಬವನ್ನು ಎಲ್ಲರೂ ಮೈಸೂರಿನಲ್ಲಿ ನೋಡಲು ಹೋಗುತ್ತಿದ್ದರು. ಆದರೆ, ಗದಗ ಎಸ್‌ಎಸ್‌ಕೆ ಸಮಾಜ ಬಾಂಧವರು ನಾಡಹಬ್ಬ ದಸರಾ ಉತ್ಸವದ ಮಹತ್ವವನ್ನು ತಿಳಿಸಿಕೊಡುವಲ್ಲಿ ಯಶಸ್ವಿಯಾಗಿದ್ದಾರೆ. ಒಳ್ಳೆಯವರಿಗೆ ಉತ್ತಮ ಕಾಲ ಬಂದೇ ಬರುತ್ತದೆ ಎನ್ನುವದಕ್ಕೆ ದುಷ್ಟರನ್ನು ಸಂಹರಿಸಿ ಶಿಷ್ಟರನ್ನು ರಕ್ಷಿಸಿದ ಈ ದಸರಾ ಹಬ್ಬವೇ ಸಾಕ್ಷಿಯಾಗಿದೆ ಎಂದು ಹೇಳಿದರು.


