ಸುಗಮವಾಗಿ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆ

0
sslc students
Spread the love

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಸೋಮವಾರ ಆರಂಭವಾದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ತಾಲೂಕಿನಲ್ಲಿ ಯಾವುದೇ ತೊಂದರೆ ಇಲ್ಲದೆ ಸುಸೂತ್ರವಾಗಿ, ಶಾಂತ ರೀತಿಯಿಂದ ನಡೆದ ಬಗ್ಗೆ ವರದಿಯಾಗಿದೆ.

Advertisement

ಪಟ್ಟಣದ ಪರೀಕ್ಷಾ ಕೇಂದ್ರಗಳಿಗೆ ತಹಸೀಲ್ದಾರ ವಾಸುದೇವ ಸ್ವಾಮಿ ಮತ್ತು ತಾ.ಪಂ ಇಓ ಕೃಷ್ಣಪ್ಪ ಧರ್ಮರ ಆಗಮಿಸಿ ಪರೀಕ್ಷೆ ಬರೆಯಲು ಆಗಮಿಸಿದ ವಿದ್ಯಾರ್ಥಿಗಳಿಗೆ ಗುಲಾಬಿ ಹೂ ನೀಡುವ ಮೂಲಕ ಶುಭಕೋರಿದರು. ಈ ವೇಳೆ ಮಾತನಾಡಿದ ಅವರು, ವಿದ್ಯಾರ್ಥಿಗಳಿಗೆ ಇದೊಂದು ಮಹತ್ವದ ಘಟ್ಟವಾಗಿದ್ದು, ಆತ್ಮಸ್ಥೈರ್ಯ, ವಿಶ್ವಾಸ, ಅಚಲ ನಂಬಿಕೆಯಿಂದ ಪರೀಕ್ಷೆ ಎದುರಿಸಿ. ಯಶಸ್ಸು ನಿಮ್ಮ ಪ್ರಯತ್ನ, ಶ್ರಮದ ಮೇಲೆ ನಿಂತಿದೆ. ಉತ್ತಮ ಸಾಧನೆ ಮಾಡುವ ಗುರಿಯೊಂದಿಗೆ ಸಾಗಿ ಉತ್ತಮ ಅಂಕಗಳನ್ನು ಪಡೆದು ಕಲಿತ ಶಾಲೆಗೆ, ತಂದೆ-ತಾಯಿಗೆ, ಊರಿಗೆ ಕೀರ್ತಿ ತರುವಂತವರಾಗಿರಿ ಎಂದು ಹಾರೈಸಿದರು. ಆಯಾ ಕೇಂದ್ರಗಳ ಮುಖ್ಯ ಅಧೀಕ್ಷಕರು, ಬಿಆರ್‌ಸಿ ಈಶ್ವರ ಮೇಡ್ಲೇರಿ ಇದ್ದರು.

sslc exam

ಸೋಮವಾರ ಕನ್ನಡ ಪರೀಕೆಗೆ ಲಕ್ಷ್ಮೇಶ್ವರ ತಾಲೂಕಗಳಲ್ಲಿ ಒಟ್ಟು 6 ಪರೀಕ್ಷಾ ಕೇಂದ್ರಗಳಲ್ಲಿನ ಒಟ್ಟು 1618 ವಿದ್ಯಾರ್ಥಿಗಳಲ್ಲಿ 15 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದು, 1603 ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ಬಿಸಿಎನ್ ಪ್ರೌಢಶಾಲೆ, ಪಾರ್ವತಿ ಮಕ್ಕಳ ಬಳಗದ ಪ್ರೌಢಶಾಲೆ, ಉಮಾ ವಿದ್ಯಾಲಯ ಪ್ರೌಢಶಾಲೆ, ಸಮೀಪದ ಪು.ಬಡ್ನಿ ಸರಕಾರಿ ಪ್ರೌಢಶಾಲೆ, ಶಿಗ್ಲಿಯ ಎಸ್‌ಎಸ್‌ಕೆ ಪ್ರೌಢಶಾಲೆ, ಬಾಲೆಹೊಸೂರಿನ ಸರಕಾರಿ ಪ್ರೌಢಶಾಲೆ ಸೇರಿ ಒಟ್ಟು 6 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 15 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದು, ಪರೀಕ್ಷಾ ಸಮಯದಲ್ಲಿ ಯಾವುದೇ ನಕಲು ಪ್ರಕರಣಗಳು ನಡೆಯದೆ ಶಾಂತಿಯುತವಾಗಿ ಪರೀಕ್ಷೆಗಳು ನಡೆದವು. ಜಾಗೃತ ದಳದ ಅಧಿಕಾರಿಗಳು, ಮತ್ತಿತರ ಜಾಗೃತ ದಳದ ತಂಡದವರು, ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳು ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರೀಶಿಲನೆ ನಡೆಸಿದರು.

ಕೇಂದ್ರಗಳಿಗೆ ಅವಶ್ಯಕ ಸೌಲಭ್ಯಗಳನ್ನು ಒದಗಿಸಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮಂಗಳಾ ತಾಪಸ್ಕರ್ ತಿಳಿಸಿದರು. ಪಟ್ಟಣದ ಉಮಾ ವಿದ್ಯಾಲಯ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿನಿಯೋರ್ವಳಿಗೆ ಅನಾರೋಗ್ಯ ಕಾಡಿದ್ದರಿಂದ ಅಲ್ಲಿನ ಪರೀಕ್ಷಾ ಮೇಲ್ವಿಚಾರಕರು ಅವಳಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಧೈರ್ಯ ಹೇಳಿ ಮತ್ತೆ ಪರೀಕ್ಷೆ ಬರೆಯಿಸಿದ ಘಟನೆ ಜರುಗಿತು.

 


Spread the love

LEAVE A REPLY

Please enter your comment!
Please enter your name here