ಕರ್ನಾಟಕದಲ್ಲಿ ಇಂದಿನಿಂದ SSLC ಪರೀಕ್ಷೆ ಆರಂಭ: ಆಲ್ ದಿ ಬೆಸ್ಟ್ ಮಕ್ಕಳೇ! ಭಯ ಬಿಟ್ಟು Exam ಬರೆಯಿರಿ!

0
Spread the love

ಬೆಂಗಳೂರು:- ಕರ್ನಾಟಕದಲ್ಲಿ ಇಂದಿನಿಂದ SSLC ಪರೀಕ್ಷೆ ಆರಂಭವಾಗಲಿದೆ. ಮೊದಲ ದಿನ ಪ್ರಥಮ ಭಾಷೆ ಪರೀಕ್ಷೆಗಳು ನಡೆಯಲಿವೆ. ಕಳೆದ ಬಾರಿಯಂತೆ ಈ ಸಾಲಿನಲ್ಲೂ ಸಿ.ಸಿ,ಕ್ಯಾಮೆರಾ, ವೆಬ್‌ಕಾಸ್ಟಿಂಗ್‌ ಕಣ್ಗಾವಲಿನಲ್ಲಿ ಪರೀಕ್ಷೆಗಳು ನಡೆಯಲಿವೆ.

Advertisement

ಪರೀಕ್ಷೆಗೆ 8.42 ಲಕ್ಷ ತರಗತಿ ವಿದ್ಯಾರ್ಥಿಗಳು ಸೇರಿ ಒಟ್ಟು 8,96,887 ಮಕ್ಕಳು ನೋಂದಾಯಿಸಿದ್ದಾರೆ. ಈ ಪೈಕಿ 3.35 ಲಕ್ಷಕ್ಕೂ ಹೆಚ್ಚು ಗಂಡುಮಕ್ಕಳು, 3.78 ಲಕ್ಷಕ್ಕೂ ಹೆಚ್ಚು ಬಾಲಕಿಯರು ಮತ್ತು 5 ತೃತೀಯ ಲಿಂಗಿಗಳು ಇದ್ದಾರೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಪಾರದರ್ಶಕವಾಗಿ, ಯಾವುದೇ ಅಹಿತಕರ ಘಟನೆ ನಡೆಯದಂತೆ ನಡೆಸಲು ಕ್ರಮ ವಹಿಸಲಾಗಿದೆ. ಇನ್ನೂ ಮೊಬೈಲ್‌ ಫೋನ್‌, ಎಲೆಕ್ಟ್ರಾನಿಕ್‌ ಸಾಧನಗಳು, ಇಯರ್‌ ಫೋನ್‌ ಇತ್ಯಾದಿಗಳನ್ನು ಪರೀಕ್ಷಾ ಕೊಠಡಿಗೆ ತರುವಂತೆ ಇಲ್ಲ. ಇದರೊಂದಿಗೆ ಉದ್ದ ಕೈಯ ಶರ್ಟ್‌ಗಳನ್ನು ಧರಿಸುವಂತೆ ಇಲ್ಲ. ಪರೀಕ್ಷಾ ಕೊಠಡಿಯಲ್ಲಿ ವೆಬ್‌ಕಾಸ್ಟಿಂಗ್‌ ಅಳವಡಿಸಲಾಗಿದೆ. ವಿವಿಧ ಶಾಲೆಗಳು ಶೇಕಡ 100 ಫಲಿತಾಂಶ ಪಡೆಯುವ ಉದ್ದೇಶದಿಂದ ಉತ್ತರ ಹೇಳಿಕೊಡುವುದು, ನಕಲು ಮಾಡಲು ಅನುವು ಮಾಡಿಕೊಡುವುದು ಇಂತಹ ಯಾವುದೇ ಕಾನೂನುಬಾಹಿರ ಚಟುವಟಿಕೆಗಳಿಗೆ ಅವಕಾಶ ನೀಡದಂತೆ ಕಟ್ಟುನಿಟ್ಟಾದ ಕ್ರಮ ಕೈಗೊಳ್ಳಲಾಗಿದೆ.


Spread the love

LEAVE A REPLY

Please enter your comment!
Please enter your name here