ಮೈಸೂರು: ಹೃದಯಾಘಾತ ಎಂಬುವುದು ಇತ್ತೀಚಿಗೆ ಸಂಭವಿಸುವಂತಹ ಸಾಮನ್ಯ ಕಾಯಿಲೆಯಾಗಿದೆ. ಚಿಕ್ಕ ಮಕ್ಕಳು ಹೃದಯಾಘಾತದಿಂದ ಸಾವನ್ನಪ್ಪುತ್ತಿರುವ ಸಂಖ್ಯೆ ಹೆಚ್ಚಾಗುತ್ತಿದೆ. ಆಟವಾಡುತ್ತಿರುವಾಗಲೋ ಅಥವಾ ಕುಳಿತುಕೊಂಡಿರುವಾಗಲೋ ಏಕಾಏಕಿ ಹೃದಯಾಘಾತಕ್ಕೆ ಬಲಿಯಾಗುತ್ತಿದ್ದಾರೆ.
Advertisement
ಇದೀಗ ಪಿರಿಯಾಪಟ್ಟಣ ತಾಲೂಕಿನ ಕೆಲ್ಲೂರು ಗ್ರಾಮದಲ್ಲಿ ಹೃದಯಾಘಾತದಿಂದ ಎಸ್ಎಸ್ಎಲ್ಸಿ ವಿದ್ಯಾರ್ಥಿನಿ ಮೃತಪಟ್ಟ ಘಟನೆ ನಡೆದಿದೆ. ನಾಗರಾಜ್, ವಸಂತ ದಂಪತಿ ಪುತ್ರಿ ದೀಪಿಕಾ (15) ಮೃತಪಟ್ಟ ವಿದ್ಯಾರ್ಥಿನಿಯಾಗಿದ್ದು,
ರಾವಂದೂರು ಕರ್ನಾಟಕ ಪಬ್ಲಿಕ್ ಶಾಲೆಯ ವಿದ್ಯಾರ್ಥಿನಿ ದೀಪಿಕಾ ಇದ್ದಕ್ಕಿದ್ದಂತೆ ಅಸ್ವಸ್ಥಳಾಗಿದ್ದಾಳೆ. ತಕ್ಷಣವೇ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮಾರ್ಗ ಮಧ್ಯೆ ಸಾವು ಸಂಭವಿಸಿದೆ. ಇನ್ನೂ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.