ಕಾಲ್ತುಳಿತ ಪ್ರಕರಣ: ರಾಜ್ಯ ಸರ್ಕಾರದ ವಿರುದ್ಧ ಜೂ.13 ಬಿಜೆಪಿ ಪ್ರೊಟೆಸ್ಟ್ – ವಿಜಯೇಂದ್ರ ಘೋಷಣೆ!

0
Spread the love

ಬೆಂಗಳೂರು:- ಬರೋಬ್ಬರಿ 18 ವರ್ಷಕ್ಕೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚೊಚ್ಚಲ ಐಪಿಎಲ್ ಪ್ರಶಸ್ತಿ ಗೆದ್ದು ಬೀಗಿದೆ. ತಮ್ಮ ನೆಚ್ಚಿನ ತಂಡ ಪ್ರಶಸ್ತಿ ಗೆಲ್ಲಲೆಂದು 18 ವರ್ಷ ಕಾದು ಕುಳಿತಿದ್ದ ಅಭಿಮಾನಿಗಳಿಗೆ ಆ ಕ್ಷಣ ರೋಮಾಂಚಕವಾಗಿತ್ತು. ಇದೇ ಖುಷಿಯಲ್ಲಿ ಆರ್ ಸಿಬಿ ತರಾತುರಿಯಲ್ಲಿ ಅಂದ್ರೆ ಕಪ್ ಗೆದ್ದ ಒಂದು ದಿನದ ಬಳಿಕ ಜೂನ್ 4 ರಂದೇ ಆರ್ ಸಿಬಿ ವಿಜಯೋತ್ಸವ ಹಮ್ಮಿಕೊಂಡಿತ್ತು. ಆದ್ರೆ ಈ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅತೀ ಹೆಚ್ಚು ಜನಸಂಖ್ಯೆ ಸೇರಿದ ಕಾರಣ ಕಾಲ್ತುಳಿತ ಸಂಭವಿಸಿ 11 ಮಂದಿ ಸಾವನ್ನಪ್ಪಿದ್ದರು. ಅಲ್ಲದೇ ಸಾಕಷ್ಟು ಮಂದಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇನ್ನೂ ಈ ಘಟನೆ ಬೆನ್ನಲ್ಲೇ ರಾಜ್ಯ ಸರ್ಕಾರದ ಆತುರದ ನಿರ್ಧಾರದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

Advertisement

ಇನ್ನೂ ಈ ದುರಂತಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಹೋರಾಟ ಮಾಡಲು ತೀರ್ಮಾನಿಸಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ ವಿಜಯೇಂದ್ರ ಅವರು ಪ್ರಕಟಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಜನವಿರೋಧಿ ಕಾಂಗ್ರೆಸ್ ಸರ್ಕಾರ ಕಿತ್ತೊಗೆಯುವ ವರೆಗೂ ಹೋರಾಟ ಮುಂದುವರೆಸಲು ನಿರ್ಧರಿಸಿದ್ದೇವೆ. ಜೂನ್ 13ರಂದು ಬೆಂಗಳೂರು ಮಹಾನಗರದ ಫ್ರೀಡಂ ಪಾರ್ಕಿನಲ್ಲಿ ಪ್ರತಿಭಟನೆ ಇದೆ. ಬಿಜೆಪಿ ಕಾರ್ಯಕರ್ತರು, ಘಟನೆಯಲ್ಲಿ ನೊಂದ ಕುಟುಂಬಗಳ ಸದಸ್ಯರು, ನೊಂದವರು ಬರಲಿದ್ದಾರೆ. ಸುಮಾರು 15- 20 ಸಾವಿರ ಸಂಖ್ಯೆಯಲ್ಲಿ ಪ್ರತಿಭಟನಾಕಾರರು ಸೇರಲಿದ್ದಾರೆ ಎಂದು ವಿವರಿಸಿದರು.

ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆಯಲ್ಲಿ ನಡೆದ ಕಾಲ್ತುಳಿತ, 11 ಸಾವಿನ ಸಂಬಂಧ ದುರ್ಘಟನೆಯಲ್ಲಿ ಮುಖ್ಯಮಂತ್ರಿಗಳೇ ಆರೋಪಿ ನಂ.1, ಉಪ ಮುಖ್ಯಮಂತ್ರಿಗಳು 2ನೇ ಆರೋಪಿ, ಕೈಕಟ್ಟಿ ಕುಳಿತಿದ್ದ ಗೃಹ ಸಚಿವ ಪರಮೇಶ್ವರ್ ಅವರು ಆರೋಪಿ ನಂ.3, ನಂತರದ ಹೊಣೆಗಾರರು ಆರ್‌ಸಿಬಿ, ಕೆಎಸ್‌ಸಿಎ, ಡಿಎನ್‍ಎ ಎಂದು ತಿಳಿಸಿದರು.


Spread the love

LEAVE A REPLY

Please enter your comment!
Please enter your name here