ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ್ದ ಕಾಲ್ತುಳಿತ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಬಗ್ಗೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಬೆಂಗಳೂರು ಕಾಲ್ತುಳಿತಕ್ಕೆ ಗುಪ್ತಚರ ಇಲಾಖೆ ವೈಫಲ್ಯ ಎನ್ನುವ ಮಾತುಗಳು ಜೋರಾಗುತ್ತಿದ್ದಂತೆಯೇ ಗುಪ್ತಚರ ಇಲಾಖೆ ಎಡಿಜಿಪಿ ಹೇಮಂತ್ ನಿಂಬಾಳ್ಕರ್ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಬೆಂಗಳೂರು ಕಾಲ್ತುಳಿತ ಪ್ರಕರಣದಲ್ಲಿ ಬೆಂಗಳೂರು ಪೊಲೀಸ್ ಆಯುಕ್ತ ದಯಾನಂದ್ ಸೇರಿದಂತೆ ಕೆಲ ಪೊಲೀಸ್ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಲಾಗಿತ್ತು. ಈ ಬಗ್ಗೆ ಸಿಎಂ ಸಿದ್ದರಾಮಯ್ಯನವರೇ ಸುದ್ದಿಗೋಷ್ಠಿಯಲ್ಲಿ ಪೊಲೀಸ್ ಅಧಿಕಾರಿಗಳ ಕರ್ತವ್ಯಲೋಪದ ಬಗ್ಗೆ ಹೇಳಿದ್ದರು. ಅಲ್ಲದೇ ಗುಪ್ತಚರ ಇಲಾಖೆಯೂ ಸಹ ಫೇಲ್ ಆಗಿದೆ ಎಂದು ಹೇಳಿದ್ದರು. ಇದರ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರ, ಗುಪ್ತಚರ ಇಲಾಖೆ ಎಡಿಜಿಪಿ ಹೇಮಂತ್ ನಿಂಬಾಳ್ಕರ್ ಅವರನ್ನು ವರ್ಗಾವಣೆ ಮಾಡಿದೆ.


