ಹೈದರಾಬಾದ್ : ಟಾಲಿವುಡ್ನ ನಟ ಅಲ್ಲು ಅರ್ಜುನ್ ಅವರು ತಮ್ಮ ‘ಪುಷ್ಪ 2, ದಿ ರೂಲ್’ ಚಿತ್ರದ ಪ್ರೀಮಿಯರ್ ಶೋಗೆ ಆಗಮಿಸಿದಾಗ, ಹೈದರಾಬಾದ್ ಚಿತ್ರಮಂದಿರದ ಹೊರಗೆ ಕಾಲ್ತುಳಿತ ಉಂಟಾಗಿದೆ. ಇನ್ನು ದುರ್ಘಟನೆಯಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಅವರನ್ನು ಹೈದರಾಬಾದ್ನ ಚಿಕ್ಕಡಪಲ್ಲಿ ಪೊಲೀಸರು ಬಂಧಿಸಿದ್ದಾರೆ .
ಇದೇ ತಿಂಗಳ ಡಿಸೆಂಬರ್ 4 ರಂದು ನಡೆದ ʻಪುಷ್ಪ 2: ದಿ ರೂಲ್ʼನ ಪ್ರೀಮಿಯರ್ ಶೋ ವೇಳೆ ಹೈದರಾಬಾದ್ನ ಸಂಧ್ಯಾ ಥಿಯೇಟರ್ನಲ್ಲಿ ಕಾಲ್ತುಳಿತ ಸಂಭವಿಸಿ ರೇವತಿ (39) ಎಂಬ ಮಹಿಳೆ ಸಾವನ್ನಪ್ಪಿದ್ದರು. ಅವರ 9 ವರ್ಷದ ಮಗ ಕಾಲ್ತುಳಿತಕ್ಕೆ ಸಿಕ್ಕಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಈ ಪ್ರಕರಣದಲ್ಲಿ ಅಲ್ಲು ಅರ್ಜುನ್ ಸಹ ಆರೋಪಿಯಾಗಿದ್ದರು. ಈ ಪ್ರಕರಣ ವಜಾಗೊಳಿಸುವಂತೆ ನಟ ಈಗಾಗಲೇ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಈನಡುವೆ ಚಿಕ್ಕಡಪಲ್ಲಿ ಪೊಲೀಸರು ಏಕಾಏಕಿ ಬಂಧಿಸಿದ್ದಾರೆ ಎನ್ನಲಾಗಿದೆ.