ಕಾಲ್ತುಳಿತ ಕೇಸ್: ಮೃತ ಆರ್‌ಸಿಬಿ ಅಭಿಮಾನಿಗಳ ಕುಟುಂಬಕ್ಕೆ ಸಂತಾಪ ಸೂಚಿಸಿದ ವಿಜಯ್ ಮಲ್ಯ!

0
Spread the love

ಬೆಂಗಳೂರು:- ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ದುರಂತಕ್ಕೆ 11 ಮಂದಿ ಬಲಿಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಉದ್ಯಮಿ ವಿಜಯ್ ಮಲ್ಯ ಮರುಕ ವ್ಯಕ್ತಪಡಿಸಿದ್ದಾರೆ.

Advertisement

ಈ ಸಂಬಂಧ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿರುವ ಅವರು, ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ ಕಾಲ್ತುಳಿತದಿಂದ ಆದ ಜೀವಹಾನಿ ಮತ್ತು ಗಾಯಗೊಂಡವರ ಬಗ್ಗೆ ಕೇಳಿ ತೀವ್ರ ದುಃಖವಾಗಿದೆ. ಐಪಿಎಲ್ ಚಾಂಪಿಯನ್‌ ವಿಜಯೋತ್ಸವ ಆಚರಿಸಲು ಬಂದಿದ್ದ ಆರ್‌ಸಿಬಿ ಅಭಿಮಾನಿಗಳು ಸಾವಿಗೀಡಾಗಿದ್ದಾರೆ. ಮೃತರ ಕುಟುಂಬಗಳಿಗೆ ಸಂತಾಪಗಳು, ಓಂ ಶಾಂತಿ ಎಂದು ಬರೆದುಕೊಂಡಿದ್ದಾರೆ.

ಘಟನೆ ವಿವರ:

ಇನ್ನೂ ಆರ್‌ಸಿಬಿ ಗೆಲುವು ವಿಜಯೋತ್ಸವದ ವೇಳೆ ಬುಧವಾರ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ ಕಾಲ್ತುಳಿತಕ್ಕೆ 11 ಆರ್‌ಸಿಬಿ ಫ್ಯಾನ್ಸ್‌ ದುರ್ಮರಣಕ್ಕೀಡಾಗಿದ್ದಾರೆ. 50ಕ್ಕೂ ಹೆಚ್ಚು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.


Spread the love

LEAVE A REPLY

Please enter your comment!
Please enter your name here