RCB ವಿಜಯೋತ್ಸವ ವೇಳೆ ಕಾಲ್ತುಳಿತ: ಸಸ್ಪೆಂಡ್ ಆಗಿದ್ದ ವಿಕಾಸ್ ಕುಮಾರ್ ಅಮಾನತು ರದ್ದು!

0
Spread the love

ಬೆಂಗಳೂರು: ಜೂನ್ 4 ರಂದು ಸಂಭವಿಸಿದ್ದ ಚಿನ್ನಸ್ವಾಮಿ ಕಾಲ್ತುಳಿತ ದುರಂತದಲ್ಲಿ 11 ಮಂದಿ ಸಾವನ್ನಪ್ಪಿದ್ದರು. ಪ್ರಕರಣ ಸಂಬಂಧ ಪೊಲೀಸ್ ಕಮಿಷನರ್ ಸೇರಿ ಹಲವರನ್ನು ಸಸ್ಪೆಂಡ್ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು

Advertisement

ಇದೀಗ ರಾಜ್ಯ ಸರ್ಕಾರಕ್ಕೆ ತೀವ್ರ ಮುಖಭಂಗವಾಗಿದೆ. ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್ ಅಮಾನತು ನಿರ್ಧಾರವನ್ನು ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ ಮಂಗಳವಾರ ರದ್ದುಪಡಿಸಿ ಆದೇಶಿಸಿದೆ. ನ್ಯಾಯಮೂರ್ತಿ ಬಿಕೆ ಶ್ರೀವಾತ್ಸವ ಮತ್ತು ಸಂತೋಷ್ ಮೆಹ್ರಾ ಅವರಿದ್ದ ಪೀಠ ಆದೇಶ ನೀಡಿದೆ. ಅಲ್ಲದೆ, ಹಿಂದಿನ ಎಲ್ಲಾ ಭತ್ಯೆ, ಸೌಲಭ್ಯ ಒದಗಿಸಲು ನಿರ್ದೇಶನ ನೀಡಿದೆ. ವಿಕಾಸ್ ಕುಮಾರ್ ಪರ ಹಿರಿಯ ವಕೀಲ ಧ್ಯಾನ್ ಚಿನ್ನಪ್ಪ ವಾದಿಸಿದ್ದರು.

ಆರ್​ಸಿಬಿ ಐಪಿಎಲ್ ಗೆಲುವನ್ನು ಸಂಭ್ರಮಿಸಲು ಜೂನ್ 3 ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿಜಯೋತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮ ಹಾಗೂ ನೆಚ್ಚಿನ ಆಟಗಾರರನ್ನು ವೀಕ್ಷಿಸಲು ಕ್ರೀಡಾಂಗಣಕ್ಕೆ ಲಕ್ಷಾಂತರ ಅಭಿಮಾನಿಗಳು ಆಗಮಿಸಿದ್ದರು.

ಆ ಸಂದರ್ಭದಲ್ಲಿ ಕಾಲ್ತುಳಿತ ಸಂಭವಿಸಿ 11 ಮಂದಿ ಮೃತಟ್ಟಿದ್ದರು. ಪ್ರಕರಣ ಸಂಬಂಧ ರಾಜ್ಯ ಸರ್ಕಾರ ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತರಾಗಿದ್ದ ವಿಕಾಸ್ ಕುಮಾರ್ ಅವರನ್ನು ಅಮಾನತು ಮಾಡಿತ್ತು. ಈ ಅಮಾನತು ಪ್ರಶ್ನಿಸಿ ವಿಕಾಸ್​ ಕುಮಾರ್ ಅವರು ಸಿಎಟಿ ಮೊರೆ ಹೋಗಿದ್ದರು.

ಇದೀಗ, ವಿಕಾಸ್ ಕುಮಾರ್ ಅವರ ಅಮಾನತು ಆದೇಶ ಹಿಂಪಡೆಯುವಂತೆ ರಾಜ್ಯ ಸರ್ಕಾರಕ್ಕೆ ಸಿಎಟಿ ನಿರ್ದೇಶನ ನೀಡಿರುವುದರಿಂದ, ಪೊಲೀಸ್ ಆಯುಕ್ತ ಬಿ ದಯಾನಂದ ಹಾಗೂ ಇತರರ ಅಮಾನತು ಆದೇಶ ಏನಾಗಲಿದೆ ಎಂಬ ಕುತೂಹಲ ಮೂಡಿದೆ.


Spread the love

LEAVE A REPLY

Please enter your comment!
Please enter your name here