ಪ್ರಯಾಗರಾಜ್: ಮಹಾ ಕುಂಭಮೇಳದಲ್ಲಿ ಕಾಲ್ತುಳಿತ ಸಂಭವಿಸಿ ಪ್ರಾಣ ಹಾನಿಯಾಗಿದ್ದು, ಕೆಲವು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇನ್ನೂ ಇದರಲ್ಲಿ ಬೆಳಗಾವಿಯ ಅರುಣ್ ಮತ್ತು ಕಾಂಚನಾ ಕೋಪರ್ಡೆ ದಂಪತಿ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಸದ್ಯ ಪ್ರಯಾಗ್ರಾಜ್ನ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾಲ್ತುಳಿತದ ವೇಳೆ ದಂಪತಿ ಬೇರೆ ಬೇರೆಯಾಗಿದ್ದಾರೆ.
Advertisement
ಸದ್ಯ ಅರುಣ್ ಒಂದು ಆಸ್ಪತ್ರೆಯಲ್ಲಿ, ಕಾಂಚನಾ ಮತ್ತೊಂದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರು ಕುಟುಂಬಸ್ಥರಿಗೆ ದೂರವಾಣಿ ಕರೆ ಮಾಡಿ ಮಾತನಾಡಿದ್ದಾರೆ. ಅರುಣ್ ಕೋಪರ್ಡೆ, ಕಾಂಚನಾ ಕೋಪರ್ಡೆ ರವಿವಾರ ಬೆಳಗಾವಿಯಿಂದ ಹೊರಟ್ಟಿದ್ದರು. ಸದ್ಯ ಕಾಂಚನಾ ನಿರಂತರವಾಗಿ ಪುತ್ರ ಓಂಕಾರ್ ಜೊತೆಗೆ ಪೋನ್ ಸಂಪರ್ಕದಲ್ಲಿದ್ದಾರೆ ಎಂದು ತಿಳಿದು ಬಂದಿದೆ.