ಪರಿಶಿಷ್ಟರ ಹಣ ದೋಚಲು ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಾಗಿದೆ: ಆರ್ ಅಶೋಕ್!

0
Spread the love

ಬೆಂಗಳೂರು:- ಪರಿಶಿಷ್ಟರ ಹಣ ದೋಚಲು ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಾಗಿದೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಹೇಳಿದ್ದಾರೆ.

Advertisement

ಈ ಬಗ್ಗೆ x ಮಾಡಿರುವ ಆರ್ ಅಶೋಕ್, ಪರಿಶಿಷ್ಟರ 11.8 ಸಾವಿರ ಕೋಟಿ ರೂ. ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳಲು ರಾಜ್ಯ ಕಾಂಗ್ರೆಸ್ ಮುಂದಾಗಿದೆ. ಈ ಮೂಲಕ ಕಾಂಗ್ರೆಸ್‌ನವರು ಮತ್ತೊಮ್ಮೆ ಪರಿಶಿಷ್ಟ ಸಮುದಾಯಗಳಿಗೆ ದ್ರೋಹ ಬಗೆಯಲು ಹೊರಟಿದ್ದಾರೆ. ಇದು ದಲಿತ ವಿರೋಧಿ ಕಾಂಗ್ರೆಸ್ ಸರ್ಕಾರ ಎಂದು ಆಕ್ರೋಶ ಹೊರಹಾಕಿದರು.

ಹಣವಿಲ್ಲದ ಮೇಲೆ ಬಜೆಟ್‌ನಲ್ಲಿ ಸುಮ್ಮನೆ ಕಾಟಾಚಾರಕ್ಕೆ ಘೋಷಣೆ ಮಾಡುತ್ತೀರಾ? ಬಜೆಟ್‌ನಲ್ಲಿ ಅವಾಸ್ತವಿಕ ಘೋಷಣೆಗಳನ್ನು ಮಾಡಿ, ಪರಿಶಿಷ್ಟರ ಮೂಗಿಗೆ ತುಪ್ಪ ಸವರಿದ್ದೀರಿ. ಈ ಮೂಲಕ ಬಿಟ್ಟಿ ಪ್ರಚಾರ ಪಡೆದುಕೊಂಡರೆ ಪರಿಶಿಷ್ಟ ಸಮುದಾಯಗಳ ಕಲ್ಯಾಣ ಆಗುತ್ತಾ? ಇದೇನಾ ತಮಗೆ ಪರಿಶಿಷ್ಟ ಸಮುದಾಯಗಳ ಬಗ್ಗೆ ಇರುವ ಬದ್ಧತೆ? ಇದೇನಾ ತಾವು ಭಾಷಣ ಬಿಗಿಯುವ ಸಾಮಾಜಿಕ ನ್ಯಾಯ? ಎಂದು ವಾಗ್ದಾಳಿ ನಡೆಸಿದರು.

ಒಂದು ಕಡೆ ಬಿಡುಗಡೆ ಮಾಡಿರುವ ಅಲ್ಪ ಸ್ವಲ್ಪ ಅನುದಾನವನ್ನು ಭ್ರಷ್ಟಾಚಾರಕ್ಕೆ ಮತ್ತೊಂದು ಕಡೆ ಘೋಷಣೆ ಮಾಡಿದ ಅನುದಾನವನ್ನ ಹಂಚಿಕೆ ಮಾಡದೆ ಬಾಕಿ ಉಳಿಸಿಕೊಳ್ಳುತ್ತೀರಿ. ನಿಮ್ಮ ಕಾಂಗ್ರೆಸ್ ಸರ್ಕಾರಕ್ಕೆ ನಾಚಿಕೆಯಾಗಬೇಕು. ತಮಗೆ ಕಿಂಚಿತ್ತಾದರೂ ಆತ್ಮಸಾಕ್ಷಿ ಎನ್ನುವುದು ಇದ್ದರೆ ಇನ್ನೆಂದೂ ಅಹಿಂದ ಹೆಸರಿನಲ್ಲಿ ರಾಜಕೀಯ ಮಾಡಬೇಡಿ ಎಂದು ಆಗ್ರಹಿಸಿದರು.


Spread the love

LEAVE A REPLY

Please enter your comment!
Please enter your name here