ಕನ್ನಡಿಗರ ಮೇಲೆ ರಾಜ್ಯ ಕಾಂಗ್ರೆಸ್ ಸರ್ಕಾರ ದರ ಏರಿಕೆ ದಂಡಯಾತ್ರೆ ನಡೆಸುತ್ತಿದೆ: ಹೆಚ್.ಡಿ.ಕುಮಾರಸ್ವಾಮಿ ಕಿಡಿ

0
Spread the love

ನವದೆಹಲಿ: ಕನ್ನಡಿಗರ ಮೇಲೆ ರಾಜ್ಯ ಕಾಂಗ್ರೆಸ್ ಸರ್ಕಾರ ದರ ಏರಿಕೆ ದಂಡಯಾತ್ರೆ ನಡೆಸುತ್ತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ದರ ಏರಿಕೆಗೆ ಪಂಚ ಗ್ಯಾರಂಟಿಯನ್ನು ನೆಪ ಮಾಡಿಕೊಂಡಿದೆ. ಆದರೆ ಸರ್ಕಾರದ ದುರುದ್ದೇಶ ಜನರ ಲೂಟಿ ಮಾಡುವುದಷ್ಟೇ.

Advertisement

ಭಾರತದ ಮೇಲೆ ಆಕ್ರಮಣ ನಡೆಸಿ ನಿರಂತರ ಲೂಟಿ ಮಾಡಿದ ಮಹಮ್ಮದ್ ಘಜ್ನಿ, ಮಹಮ್ಮದ್ ಘೋರಿ ಅವರಿಬ್ಬರೂ ನಾಚುವಂತೆ ಕನ್ನಡಿಗರ ಮೇಲೆ ರಾಜ್ಯ ಕಾಂಗ್ರೆಸ್ ಸರ್ಕಾರ ದರ ಏರಿಕೆ ದಂಡಯಾತ್ರೆ ನಡೆಸುತ್ತಿದೆ ಎಂದು ಆರೋಪಿಸಿದ್ದಾರೆ.

ದುರಾಡಳಿತದಿಂದ ಸಮೃದ್ಧ ಕರ್ನಾಟಕವನ್ನು ಬರ್ಬಾದ್ ಮಾಡಿರುವ ಕಾಂಗ್ರೆಸ್ ಕಂಪನಿ ಸರ್ಕಾರ ದರ ಬೀಜಾಸುರ ರೂಪ ತಳೆದು ಜನರ ರಕ್ತ ಹೀರುತ್ತಿದೆ. ನೀರು, ಮೆಟ್ರೋ ರೈಲು, ಕೆಎಸ್‌ಆರ್‌ಟಿಸಿ ಬಸ್ ಟಿಕೆಟ್, ಹಾಲು(3 ಸಲ ದರ ಏರಿಕೆ), ವಿದ್ಯುತ್,

ಮುದ್ರಾಂಕ, ಮಾರ್ಗದರ್ಶಿ ಮೌಲ್ಯ, ಅಬಕಾರಿ ಸುಂಕ, ಸರ್ಕಾರಿ ಆಸ್ಪತ್ರೆಗಳಲ್ಲಿ ಹೊರ ರೋಗಿಗಳ ಶುಲ್ಕ, ಶವದ ಮರಣೋತ್ತರ ಪರೀಕ್ಷೆ ಶುಲ್ಕ, ವೈದ್ಯಕೀಯ ಪ್ರಮಾಣ ಪತ್ರದ ದರ, ಲ್ಯಾಬ್‌ನಲ್ಲಿ ಪರೀಕ್ಷೆ ಶುಲ್ಕ, ವೃತ್ತಿಪರ ತೆರಿಗೆ, ಬಿತ್ತನೆ ಬೀಜಗಳ ದರವನ್ನು ಏರಿಕೆ ಮಾಡಿದೆ. ಇದು ದರ ಬೀಜಾಸುರ ಕಾಂಗ್ರೆಸ್ ಸರ್ಕಾರ ಎಂದು ದೂರಿದ್ದಾರೆ.


Spread the love

LEAVE A REPLY

Please enter your comment!
Please enter your name here