ಬೆಂಗಳೂರು:– ರಾಜ್ಯ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಅಂಬಿಕಾಪತಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಅಂಬಿಕಾಪತಿ ಅವರಿಗೆ ನಿನ್ನೆ ಸಂಜೆ 6:40 ಸುಮಾರಿಗೆ ಹೃದಯಾಘಾತವಾಗಿದೆ. ಕೂಡಲೆ ಅವರನ್ನು ಹೆಬ್ಬಾಳದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಅಂಬಿಕಾಪತಿ ಮನೆ ಮೇಲೆ ಐಟಿ ದಾಳಿ
Advertisement
ಅಕ್ಟೋಬರ್ದ 13 ರಂದು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಮಧ್ಯರಾತ್ರಿ ಆರ್. ಟಿ.ನಗರದ ಮಾಜಿ ಕಾರ್ಪೊರೇಟರ್ ಅಶ್ವತ್ಥಮ್ಮ, ಪತಿ ಆರ್.ಅಂಬಿಕಾಪತಿ ಮತ್ತು ಅಶ್ವತ್ಥಮ್ಮ ಅವರ ಬಾಮೈದ ಪ್ರದೀಪ್ ಫ್ಯ್ಲಾಟ್ ಮೇಲೆ ದಾಳಿ ಮಾಡಿದ್ದರು. ಪರಿಶೀಲನೆ ವೇಳೆ ಅಂಬಿಕಾಪತಿಯ ಬೆಡ್ ರೂಮ್ನ ಮಂಚದ ಕೆಳಗೆ 23 ಬಾಕ್ಸ್ನಲ್ಲಿ 500 ರೂ. ಮುಖಬೆಲೆಯ 42 ಕೋಟಿ ರೂ. ಕಂತೆ ಕಂತೆ ಹಣ ಪತ್ತೆಯಾಗಿತ್ತು. ಅಲ್ಲದೆ ಅಂಬಿಕಾಪತಿ ಮಗಳ ಮನೆ ಮೇಲೂ ಅಧಿಕಾರಿಗಳು ದಾಳಿ ಮಾಡಿದ್ದರು.