ಡಿಜಿ&ಐಜಿಪಿ ಅಲೋಕ್ ಮೋಹನ್ ಸೇವಾವಧಿ ವಿಸ್ತರಿಸಿದ ರಾಜ್ಯ ಸರ್ಕಾರ!

0
Spread the love

ಬೆಂಗಳೂರು:- ಡಿಜಿ&ಐಜಿಪಿ ಅಲೋಕ್ ಮೋಹನ್ ಅವರ ಸೇವಾವಧಿಯನ್ನು ಮೇ 21ರವರೆಗೆ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

Advertisement

ರಾಜ್ಯ ಪೊಲೀಸ್​ ಇಲಾಖೆಗೆ ನೂತನ ಡಿಜಿಪಿ ಆಯ್ಕೆ ಕುರಿತು ಚರ್ಚೆ ನಡೆಯುತ್ತಿರುವ ಹೊತ್ತಿನಲ್ಲೇ ಡಿಜಿಪಿ ಅಲೋಕ್​ ಮೋಹನ್​ ಅವರ ಸೇವಾವಧಿಯನ್ನು ವಿಸ್ತರಣೆ ಮಾಡಲಾಗಿದೆ. ಏಪ್ರಿಲ್ 30ರ ಬುಧವಾರ ರಂದು ವಯೋನಿವೃತ್ತಿ ಹೊಂದಬೇಕಿದ್ದ ಡಿಜಿಪಿ ಅಲೋಕ್​ ಮೋಹನ್ ಅವರ ಸೇವಾವಧಿಯನ್ನು 22 ದಿವಸಗಳ ಮಟ್ಟಿಗೆ ರಾಜ್ಯ ಸರ್ಕಾರ ವಿಸ್ತರಿಸಿದೆ. ಡಿಜಿಪಿ ಅಲೋಕ್ ಮೋಹನ್​ ಅವರು ತಮ್ಮ ಸೇವೆಯನ್ನು ಮೂರು ತಿಂಗಳ ಕಾಲ ವಿಸ್ತರಿಸುವಂತೆ ರಾಜ್ಯ ಸರ್ಕಾರಕ್ಕೆ ಕೋರಿಕೆ ಸಲ್ಲಿಸಿದ್ದರು ಎಂದು ವರದಿಯಾಗಿತ್ತು.

ಈ ತಿಂಗಳ ಅಂತ್ಯಕ್ಕೆ ತಾವು ನಿವೃತ್ತಿಯಾಗುತ್ತಿರುವ ಕಾರಣ ಈ ಹುದ್ದೆಯಲ್ಲಿ ಎರಡು ವರ್ಷ ಪೂರೈಸಲು ಆಗುತ್ತಿಲ್ಲ. ಆದುದರಿಂದ ಸುಪ್ರೀಂಕೋರ್ಟ್ ತೀರ್ಪನ ಪ್ರಕಾರ ಪೊಲೀಸ್​ ಮುಖ್ಯಸ್ಥರ ಹುದ್ದೆಗಳಿಗೆ ಎರಡು ವರ್ಷಗಳ ಅವಧಿ ನೀಡಬೇಕೆಂದು ವಿನಂತಿಸಿದ್ದರು. ಇದನ್ನು ಸರ್ಕಾರ ಪುರಸ್ಕರಿಸಿದೆ.


Spread the love

LEAVE A REPLY

Please enter your comment!
Please enter your name here