HomeKarnataka Newsಕೊನೆಗೂ ರೈತರ ಭೂ ಸ್ವಾಧೀನ ಕೈ ಬಿಟ್ಟ ರಾಜ್ಯ ಸರ್ಕಾರ: ಸಿದ್ದರಾಮಯ್ಯ ನೇತೃತ್ವದ ಸಭೆಯಲ್ಲಿ ಘೋಷಣೆ

ಕೊನೆಗೂ ರೈತರ ಭೂ ಸ್ವಾಧೀನ ಕೈ ಬಿಟ್ಟ ರಾಜ್ಯ ಸರ್ಕಾರ: ಸಿದ್ದರಾಮಯ್ಯ ನೇತೃತ್ವದ ಸಭೆಯಲ್ಲಿ ಘೋಷಣೆ

For Dai;y Updates Join Our whatsapp Group

Spread the love

ಬೆಂಗಳೂರು: ದೇವನಹಳ್ಳಿ ಭೂಮಿ ಸ್ವಾಧೀನಕ್ಕೆ ಸಂಬಂಧಿಸಿದಂತೆ ರೈತ ಮುಖಂಡರ ಜೊತೆ ಸಭೆ ನಡೆಸಿದ ಸಿಎಂ, ರೈತರ ಬೇಡಿಕೆಗೆ ಸ್ಪಂದಿಸಿದ್ದಾರೆ. ಭೂ ಸ್ವಾಧೀನವನ್ನು ಕೈ ಬಿಟ್ಟಿದ್ದೇವೆ ಎಂದು ಸಿದ್ದರಾಮಯ್ಯ ಘೋಷಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ವಿಧಾನಸೌಧದ ಸಭಾಂಗಣದಲ್ಲಿ ನಡೆದ ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹಾಗೂ ಇತರ ಗ್ರಾಮಗಳಲ್ಲಿನ ಭೂಸ್ವಾಧೀನ ಪ್ರಕ್ರಿಯೆಗೆ ಸಂಬಂಧಪಟ್ಟಂತೆ ಅಧಿಕಾರಿಗಳ ಹಾಗೂ ರೈತ ಮುಖಂಡರ ಸಭೆಯಲ್ಲಿ ಘೋಷಣೆ ಮಾಡಿದ್ದಾರೆ.

ಸರ್ಕಾರ ಭೂಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಕೈಬಿಡಲು ನಿರ್ಧರಿಸಿದೆ. ಕೆಲವು ರೈತರು ಜಮೀನು ನೀಡಲು ಸಿದ್ಧರಿರುವುದಾಗಿ ಮುಂದೆ ಬಂದಿದ್ದಾರೆ. ಜಮೀನು ನೀಡಲು ಇಚ್ಚಿಸುವವರ ಜಮೀನು ಸರ್ಕಾರ ಸ್ವಾಧೀನಪಡಿಸಿಕೊಳ್ಳಲಿದ್ದು, ಅವರಿಗೆ ಹೆಚ್ಚಿನ ಪರಿಹಾರ ಮತ್ತು ಅಭಿವೃದ್ಧಿಪಡಿಸಿದ ಜಮೀನು ನೀಡಲಾಗುವುದು. ಅಂತಹ ರೈತರಿಗೆ ಮಾರ್ಗಸೂಚಿ ದರಕ್ಕಿಂತ ಹೆಚ್ಚುವರಿ ದರವನ್ನು ನೀಡಲಿದೆ. ಅಲ್ಲಿ ಕೃಷಿ ಚಟುವಟಿಕೆಗಳನ್ನು ಮುಂದುವರೆಸಲು ಬಯಸುವ ರೈತರು ಕೃಷಿ ಚಟುವಟಿಕೆಗಳನ್ನು ಮುಂದುವರೆಸಿಕೊಂಡು ಹೋಗಬಹುದಾಗಿದೆ.

ದೇವನಹಳ್ಳಿ ತಾಲೂಕು ಬೆಂಗಳೂರಿಗೆ ಹತ್ತಿರದ್ದಲ್ಲಿದ್ದು, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಅಲ್ಲಿಯೇ ಇದೆ. ರಾಜ್ಯದ ಪ್ರತಿಯೊಬ್ಬರ ವರಮಾನ ಹೆಚ್ಚಳವಾಗಬೇಕಿದ್ದರೆ ಅಭಿವೃದ್ದಿ ಕಾರ್ಯ ನಡೆಯಬೇಕಾಗಿದೆ. ಹೊಸ ಕೈಗಾರಿಕೆಗಳ ಪ್ರಾರಂಭಕ್ಕೆ, ಬಂಡವಾಳ ಹೂಡಿಕೆಗೆ ಜಮೀನಿನ ಅಗತ್ಯವಿದೆ. ಜಮೀನು ಸ್ವಾಧೀನ ಪಡಿಸಿ ಕೈಗಾರಿಕೆಗಳನ್ನು ಪ್ರಾರಂಭಿಸಲು ಸರ್ಕಾರ ನೀಡಬೇಕಾಗುತ್ತದೆ.

ಸರ್ಕಾರ ಭೂಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಕೈಬಿಡಲು ನಿರ್ಧರಿಸಿದೆ. ಆದರೆ ಕೆಲವು ರೈತರು ಜಮೀನು ನೀಡಲು ಸಿದ್ಧರಿರುವುದಾಗಿ ಮುಂದೆ ಬಂದಿದ್ದಾರೆ. ಜಮೀನು ನೀಡಲು ಇಚ್ಚಿಸುವವರ ಜಮೀನು ಸರ್ಕಾರ ಸ್ವಾಧೀನಪಡಿಸಿಕೊಳ್ಳಲಿದ್ದು, ಅವರಿಗೆ ಹೆಚ್ಚಿನ ಪರಿಹಾರ ಮತ್ತು ಹೆಚ್ಚಿನ ವಿಸ್ತೀರ್ಣದ ಅಭಿವೃದ್ಧಿಪಡಿಸಿದ ನಿವೇಶನ ನೀಡಲಾಗುವುದು.

1777 ಎಕ್ರೆ ಜಮೀನು ದೇವನಹಳ್ಳಿ ತಾಲೂಕಿನಲ್ಲಿ ಸರ್ಕಾರ ಸ್ವಾಧೀನಪಡಿಸಿ, ಅಲ್ಲಿ ಏರೋಸ್ಪೇಸ್ ಪ್ರಾರಂಭಿಸುವುದು ಸರ್ಕಾರದ ಉದ್ದೇಶ. ಬೆಂಗಳೂರಿನ ಸಮೀಪದಲ್ಲಿ ಇದಕ್ಕೆ ಜಮೀನು ಒದಗಿಸಲು ಕೋರಿಕೆ ಸ್ವೀಕರಿಸಲಾಗಿತ್ತು. ರಾಜ್ಯದಲ್ಲಿ ಭೂಸ್ವಾಧೀನ ವಿರುದ್ಧ ಈ ಮಟ್ಟದ ಪ್ರತಿಭಟನೆ ನಡೆದಿಲ್ಲ. ಅದು ಫಲವತ್ತಾದ ವ್ಯವಸಾಯಕ್ಕೆ ಯೋಗ್ಯವಾದ ಭೂಮಿ. ಅಲ್ಲಿನ ರೈತರು ಆ ಜಮೀನಿನ ಮೇಲೆ ಹೆಚ್ಚು ಅವಲಂಬಿತರಾಗಿದ್ದಾರೆ. ಆದ್ದರಿಂದ ಭೂಸ್ವಾಧೀನ ಪ್ರಕ್ರಿಯೆ ಕೈಬಿಡಬೇಕೆಂದು ಹೋರಾಟಗಾರರು ಸ್ಪಷ್ಟಪಡಿಸಿದ್ದಾರೆ.

ಸರ್ಕಾರ ರೈತರು, ಜಮೀನುದಾರರು ಸೇರಿದಂತೆ ಎಲ್ಲರ ಅಹವಾಲುಗಳನ್ನು ಆಲಿಸಿದೆ. ರಾಜ್ಯದ ಅಭಿವೃದ್ದಿಗೆ, ಬೆಳವಣಿಗೆಗೆ ಕೈಗಾರಿಕೆ ಉತ್ತೇಜನ ನೀಡುವುದು ಅಗತ್ಯವಿದೆ. ಯಾವುದೇ ಕಾರಣಕ್ಕೆ ಜಮೀನು ಸ್ವಾಧೀನ ಕೈಬಿಟ್ಟರೆ ಈ ಕೈಗಾರಿಕೆ ಬೇರೆ ಕಡೆ ಹೋಗುವ ಸಾಧ್ಯತೆ ಇದೆ. ಆದರೂ ಸರ್ಕಾರ ರೈತಪರವಾಗಿದ್ದು, ಅವರ ಬೇಡಿಕೆಗಳನ್ನು ಪರಿಗಣಿಸಿ ಭೂಸ್ವಾಧೀನ ಪ್ರಕ್ರಿಯೆಯನ್ನು ಕೈಬಿಡಲು ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಅವರು ಹೇಳಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!