ವಿಜಯಸಾಕ್ಷಿ ಸುದ್ದಿ, ಗದಗ: ರಾಜ್ಯ ಸರಕಾರಿ ನೌಕರರ ತುಟ್ಟಿ ಭತ್ಯೆ ಜನೇವರಿ 1ರಿಂದ ಪೂರ್ವಾನ್ವಯವಾಗುವಂತೆ ಶೇ. 1.50ರಷ್ಟು ಏರಿಕೆ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರವನ್ನು ಗದಗ ಜಿಲ್ಲಾ ಸರಕಾರಿ ನೌಕರರ ಸಂಘದ ಅಧ್ಯಕ್ಷ ಡಾ. ಬಸವರಾಜ ಬಳ್ಳಾರಿ ಅಭಿನಂಧಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ರಾಜ್ಯ ಸರಕಾರಿ ನೌಕರರ ತುಟ್ಟಿ ಭತ್ಯೆ ಈ ಮೊದಲು 10.76ರಷ್ಟು ಇತ್ತು. ಇದೀಗ 1.50ರಷ್ಟು ತುಟ್ಟಿ ಭತ್ಯೆಯನ್ನು ರಾಜ್ಯ ಸರಕಾರ ಹೆಚ್ಚಳ ಮಾಡಿರುವುದರಿಂದ ಶೇ. 12.25ಕ್ಕೆ ಏರಿಕೆಯಾಗಿದೆ. ತುಟ್ಟಿ ಭತ್ಯೆ ಹೆಚ್ಚಳ ಮಾಡುವಲ್ಲಿ ಅವಿರತ ಶ್ರಮಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹಗೂ ಸಮಸ್ತ ಸಚಿವರನ್ನು ರಾಜ್ಯ ಸರಕಾರಿ ನೌಕರರ ಪರವಾಗಿ ಅಭಿನಂದಿಸಿದ್ದಾರೆ.
ಈ ಬೇಡಿಕೆ ಈಡೇರಿಕೆಗಾಗಿ ರಾಜ್ಯ ಸರಕಾರದ ಗಮನ ಸೆಳೆದು ಯಶಸ್ವಿಯಾಗಿರುವ ರಾಜ್ಯ ಸರಕಾರಿ ನೌಕರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಕ್ಷರಿ ಅವರನ್ನು, ರಾಜ್ಯ ಮತ್ತು ಗದಗ ಜಿಲ್ಲೆಯ ಸಮಸ್ತ ಸರಕಾರಿ ನೌಕರರ ಪರವಾಗಿ ಡಾ. ಬಸವರಾಜ ಬಳ್ಳಾರಿ ಅಭಿನಂದಿಸಿದ್ದಾರೆ.