ಬೆಂಗಳೂರು: ರಾಜ್ಯ ಸರ್ಕಾರ ವಿವಿಗಳನ್ನು ಮುಚ್ಚುವ ಹೊಸ ಭಾಗ್ಯ ಕೊಡುತ್ತಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್ ಅಶೋಕ್ ಕಿಡಿಕಾರಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, 9 ವಿವಿಗಳನ್ನು ಮುಚ್ಚಲು ಹೊರಟಿರುವ ಸರ್ಕಾರದ ನಿರ್ಧಾರವನ್ನು ಬಿಜೆಪಿ ಬಲವಾಗಿ ವಿರೋಧಿಸುತ್ತದೆ.
ಮೊದಲು ಮಂಡ್ಯ ವಿವಿ ಮುಚ್ಚುತ್ತಿದ್ದಾರೆ. ಮಂಡ್ಯ ಗಂಡು ನಾಡು. ಅಲ್ಲೇ ವಿವಿಗೆ ಕೊಡಲಿ ಪೆಟ್ಟು ಹಾಕುತ್ತಿದ್ದಾರೆ. ರಾಜ್ಯ ಸರ್ಕಾರ ವಿವಿಗಳನ್ನು ಮುಚ್ಚುವ ಹೊಸ ಭಾಗ್ಯ ಕೊಡುತ್ತಿದೆ. ಮಾರಿ ಕಣ್ಣು ಹೋರಿ ಮೇಲೆ ಅನ್ನುವಂತೆ ಸಿದ್ದರಾಮಯ್ಯ ಕಣ್ಣು ವಿವಿಗಳ ಮೇಲೆ ಬಿದ್ದಿದೆ ಎಂದು ವಾಗ್ದಾಳಿ ನಡೆಸಿದರು.
ಇನ್ನೂ ಕೆಆರ್‌ಎಸ್ ಪಕ್ಕ ಅಮ್ಯೂಸ್ಮೆಂಟ್ ಪಾರ್ಕ್ ಮಾಡುತ್ತಾರಂತೆ. ಇದಕ್ಕೆ 1000 ಸಾವಿರ ಕೋಟಿ ರೂ. ಕೊಡುತ್ತಿದ್ದಾರೆ. ಜಲಕ್ರೀಡೆಗೆ ಹಣ ನೀಡುತ್ತಾರೆ ಆದರೆ ವಿಶ್ವವಿದ್ಯಾಲಯ ಮುಚ್ಚಿಸುತ್ತಾರೆ. ಈ ಕಾಂಗ್ರೆಸ್‌ನವರು ಅಪರೂಪದ ಪೀಸ್‌ಗಳು ಎಂದು ವಾಗ್ದಾಳಿ ನಡೆಸಿದರು.