ವಿಜಯಸಾಕ್ಷಿ ಸುದ್ದಿ, ಗದಗ: ರಾಜ್ಯ ಸರ್ಕಾರ ರೈತರಿಂದ 10 ಲಕ್ಷ ಮೆಟ್ರಿಕ್ ಟನ್ ಮೆಕ್ಕೆ ಜೋಳವನ್ನು 2400 ರೂ ಬೆಲೆಯಲ್ಲಿ ಖರೀದಿ ಕೇಂದ್ರವನ್ನು ತೆರೆಯುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
Advertisement
ಅಕ್ಟೋಬರ್ 31ರಂದು ಗದುಗಿನ ವಿಜಯಸಾಕ್ಷಿ ದಿನಪತ್ರಿಕೆ ಈ ಕುರಿತು ವರದಿ ಪ್ರಕಟಿಸಿತ್ತು. ಸರಕಾರ ಕೂಡಲೇ ಮೆಕ್ಕೆ ಜೋಳ ಖರೀದಿ ಕೇಂದ್ರ ತೆರೆಯಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವಿ.ಆರ್. ನಾರಾಯಣರೆಡ್ಡಿ ಬಣದ ರೈತ ಸಂಘದ ಗದಗ ಜಿಲ್ಲಾಧ್ಯಕ್ಷ ಯಲ್ಲಪ್ಪ ಎಚ್.ಬಾಬರಿ ವಿಜಯಸಾಕ್ಷಿ ಪತ್ರಿಕೆ ಮೂಲಕ ಆಗ್ರಹಿಸಿದ್ದರು. ಇಂದು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಕ್ಯಾಬಿನೆಟ್ ಮೀಟಿಂಗ್‌ನಲ್ಲಿ ಮಹತ್ವದ ಆದೇಶ ನೀಡಿದ್ದು, ರಾಜ್ಯದ ಎಲ್ಲಾ ರೈತರಿಗೂ ಸಂತಸ ತಂದಿದೆ.
ಈ ಆದೇಶ ನೀಡಿರುವುದು ಸ್ವಾಗತಾರ್ಹ ಎಂದು ರೈತ ಸಂಘದ ಗದಗ ಜಿಲ್ಲಾಧ್ಯಕ್ಷ ಯಲ್ಲಪ್ಪ ಎಚ್.ಬಾಬರಿ ತಿಳಿಸಿದ್ದಾರೆ.


