HomeBengaluru Newsಬೌರಿಂಗ್ ಆಸ್ಪತ್ರೆ ದುರಂತ ಬೆನ್ನಲ್ಲೇ ಎಚ್ಚೆತ್ತ ರಾಜ್ಯ ಸರ್ಕಾರ! ಸರ್ಕಾರಿ ಆಸ್ಪತ್ರೆ ಕಟ್ಟಡಗಳ ಸ್ಥಿತಿಗತಿ ಪರಿಶೀಲನೆಗೆ...

ಬೌರಿಂಗ್ ಆಸ್ಪತ್ರೆ ದುರಂತ ಬೆನ್ನಲ್ಲೇ ಎಚ್ಚೆತ್ತ ರಾಜ್ಯ ಸರ್ಕಾರ! ಸರ್ಕಾರಿ ಆಸ್ಪತ್ರೆ ಕಟ್ಟಡಗಳ ಸ್ಥಿತಿಗತಿ ಪರಿಶೀಲನೆಗೆ ಆದೇಶ

For Dai;y Updates Join Our whatsapp Group

ಬೆಂಗಳೂರು: ನಗರದಲ್ಲಿ ಇತ್ತೀಚೆಗೆ ನಡೆದ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಗೋಡೆ ಕುಸಿತ ದುರಂತದಲ್ಲಿ ಏಳು ಮಂದಿ ಸಾವನ್ನಪ್ಪಿದ ಘಟನೆ ಬಳಿಕ ರಾಜ್ಯ ಸರ್ಕಾರ ಎಚ್ಚರಿಕೆಯ ಹೆಜ್ಜೆ ಇಟ್ಟಿದೆ.

ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳ ಕಟ್ಟಡ ಸುರಕ್ಷತೆಯನ್ನು ಸಂಪೂರ್ಣವಾಗಿ ಪರಿಶೀಲಿಸಲು ಆರೋಗ್ಯ ಇಲಾಖೆ ಮುಂದಾಗಿದೆ.

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳ ಕಟ್ಟಡಗಳು ಹಾಗೂ ಕಾಂಪೌಂಡ್‌ಗಳ ಸ್ಥಿತಿಗತಿಗಳನ್ನು ಪರಿಶೀಲಿಸಿ ತಕ್ಷಣ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಘಟನೆ ಬಳಿಕ ನಗರದಲ್ಲಿ ಸುರಿದ ಅಕಾಲಿಕ ಮಳೆಯಿಂದಾಗಿ ಶಿಥಿಲಾವಸ್ಥೆಯಲ್ಲಿದ್ದ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿದು ಏಳು ಜನರು ಸಾವನ್ನಪ್ಪಿದ್ದರು. ಈ ದುರ್ಘಟನೆಯ ನಂತರ ಸರ್ಕಾರ ತಕ್ಷಣ ಕ್ರಮ ಕೈಗೊಂಡಿದೆ.

ಸಚಿವರ ಸೂಚನೆಯಂತೆ ಡಿಹೆಚ್‌ಒ, ಟಿಹೆಚ್‌ಒ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಆಸ್ಪತ್ರೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಯಾವುದೇ ಕಟ್ಟಡ ಅಥವಾ ಕಾಂಪೌಂಡ್ ಅಪಾಯಕಾರಿ ಸ್ಥಿತಿಯಲ್ಲಿ ಕಂಡುಬಂದರೆ ತಕ್ಷಣ ದುರಸ್ತಿ ಅಥವಾ ತೆರವು ಕಾರ್ಯ ಕೈಗೊಳ್ಳುವಂತೆ ಸೂಚಿಸಲಾಗಿದೆ. ಈ ಬಗ್ಗೆ 15 ದಿನಗಳ ಒಳಗೆ ವರದಿ ಸಲ್ಲಿಸುವಂತೆ ಆದೇಶಿಸಲಾಗಿದೆ.

ಅಲ್ಲದೆ ಆಸ್ಪತ್ರೆ ಆವರಣದ ಫುಟ್‌ಪಾತ್‌ಗಳಲ್ಲಿ ನಡೆಯುವ ಬೀದಿ ವ್ಯಾಪಾರಕ್ಕೂ ಕಡಿವಾಣ ಹಾಕಲು ನಿರ್ದೇಶನ ನೀಡಲಾಗಿದೆ. ಮಳೆಗಾಲ ಆರಂಭಕ್ಕೂ ಮುನ್ನವೇ ಮುನ್ನೆಚ್ಚರಿಕೆ ಕ್ರಮಗಳನ್ನು ಕಡ್ಡಾಯವಾಗಿ ಕೈಗೊಳ್ಳುವಂತೆ ಸರ್ಕಾರ ಸೂಚಿಸಿದೆ.

ರಾಜ್ಯದ ಅನೇಕ ಸರ್ಕಾರಿ ಆಸ್ಪತ್ರೆಗಳು 20 ರಿಂದ 30 ವರ್ಷಗಳಷ್ಟು ಹಳೆಯದಾಗಿರುವ ಹಿನ್ನೆಲೆಯಲ್ಲಿ ಸುರಕ್ಷತಾ ಪರಿಶೀಲನೆ ಅತ್ಯಂತ ಅಗತ್ಯವಾಗಿದೆ ಎಂದು ಇಲಾಖೆ ಅಭಿಪ್ರಾಯಪಟ್ಟಿದೆ. ಮುಂಬರುವ ಮಳೆಗಾಲದಲ್ಲಿ ಇಂತಹ ಅನಾಹುತಗಳು ಮರುಕಳಿಸದಂತೆ ತಡೆಯಲು ಈ ಕ್ರಮ ಕೈಗೊಳ್ಳಲಾಗಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img