ವಿಜಯಸಾಕ್ಷಿ ಸುದ್ದಿ ಗದಗ: ರಾಜ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘದ ರಾಜ್ಯ ಮಟ್ಟದ ಪದಾಧಿಕಾರಿಗಳ ಹಾಗೂ ಅತಿಥಿ ಉಪನ್ಯಾಸಕರ ಸಾಮಾನ್ಯ ಸಭೆಯ ನಿರ್ಣಯದಂತೆ ಸಂಘದ ನಿಯಮಾನುಸಾರ ರಾಜ್ಯ ಘಟಕದ ನೂತನ ಪ್ರಧಾನ ಕಾರ್ಯದರ್ಶಿಯಾಗಿ ಬಾಗಲಕೋಟೆ ಜಿಲ್ಲೆಯ ಬೀಳಗಿ ಕಾಲೇಜಿನ ಹಿರಿಯ ಮಹಿಳಾ ಅತಿಥಿ ಉಪನ್ಯಾಸಕಿ ಪ್ರೊ. ಶಶಿಕಲಾ ಜೋಳದ ಅವರನ್ನು ನೇಮಕ ಮಾಡಲಾಗಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಡಾ. ಹನುಮಂತಗೌಡ ಆರ್.ಕಲ್ಮನಿ ತಿಳಿಸಿದ್ದಾರೆ.
Advertisement
ಪ್ರಸ್ತುತ ಅತಿಥಿ ಉಪನ್ಯಾಸಕರ ಆಯ್ಕೆಯ ಕುರಿತಂತೆ ಮುಂದಿನ ಹೋರಾಟದ ರೂಪುರೇಷೆ ಚರ್ಚಿಸಿ, ಅತಿಥಿ ಉಪನ್ಯಾಸಕರ ಸದ್ಯದ ಸಮಸ್ಯೆಗಳ ಕುರಿತಂತೆ ರಾಜ್ಯ ಸರ್ಕಾರದ ಗಮನಕ್ಕೆ ತರುವ ನಿರ್ಣಯವನ್ನು ಸಭೆಯಲ್ಲಿ ಕೈಗೊಳ್ಳಲಾಯಿತು. ಸಭೆಯಲ್ಲಿ ರಾಜ್ಯ ಘಟಕದ ಪದಾಧಿಕಾರಿಗಳು, ವಿವಿಧ ಜಿಲ್ಲೆಯ ಅತಿಥಿ ಉಪನ್ಯಾಸಕರ ಸಂಘದ ಪದಾಧಿಕಾರಿಗಳು ಪಾಲ್ಗೊಂಡಿದ್ದರು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


