ಜೈಲಿನಲ್ಲಿ ದರ್ಶನ್ʼಗೆ ರಾಜ್ಯಾತಿಥ್ಯ ಪ್ರಕರಣ: ಜೈಲಾಧಿಕಾರಿಗಳಿಗೆ ಸುಪ್ರೀಂ ಎಚ್ಚರಿಕೆ!

0
Spread the love

ನವದೆಹಲಿ: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳ ಜಾಮೀನು ವಿಚಾರವಾಗಿ ಇಂದು ತೀರ್ಪು ಹೊರಬಿದ್ದಿದೆ. ನಟ ದರ್ಶನ್ ಹಾಗೂ ಪವಿತ್ರಾ ಗೌಡ ಸೇರಿ ಆರೋಪಿಗಳ ಜಾಮೀನು ರದ್ದು ಮಾಡಬೇಕೆಂದು ಕೋರಿ ಪೊಲೀಸರು ಸುಪ್ರೀಂಗೆ ಅರ್ಜಿ ಸಲ್ಲಿಸಿದ್ದರು.

Advertisement

ಇಂದು ಕೋರ್ಟ್ ತೀರ್ಪು ನೀಡಿದ್ದು ನಟ ದರ್ಶನ್, ಪವಿತ್ರಾ ಗೌಡ ಸೇರಿ 7 ಜನ ಆರೋಪಿಗಳ ಜಾಮೀನು ರದ್ದಾಗಿದೆ. ಸುಪ್ರೀಂಕೋರ್ಟ್​​ನ ನ್ಯಾ.ಜೆ.ಬಿ.ಪರ್ದಿವಾಲಾ, ನ್ಯಾ.ಆರ್.ಮಹಾದೇವನ್ ಅವರಿದ್ದ ದ್ವಿಸದಸ್ಯ ಪೀಠ ಪ್ರಕರಣ ವಿಚಾರಣೆ ಮಾಡಿದ್ದು, ಆರೋಪಿ ಎಷ್ಟೇ ದೊಡ್ಡವರಿದ್ದರೂ ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ, ಯಾರೂ ಚಿಕ್ಕವರಲ್ಲ. ಆರೋಪಿಗಳಿಗೆ 5 ಸ್ಟಾರ್ ಟ್ರೀಟ್​ಮೆಂಟ್ ನೀಡಲಾಗಿದೆ.

ಜೈಲು ಅಧಿಕಾರಿಗಳನ್ನು ಸಸ್ಪೆಂಡ್ ಮಾಡಬೇಕಿತ್ತು ಎಂದು ಹೇಳಿದರು.ಇನ್ನು ಮುಂದೆ ರಾಜ್ಯಾತಿಥ್ಯದ ಯಾವುದೇ ಫೋಟೋ, ವಿಡಿಯೋ ಕಂಡು ಬಂದರೆ, ಆರೋಪಿ ಜೈಲಿನ ಲಾನ್​ನಲ್ಲಿ ಕುಳಿತು ಸಿಗರೇಟ್ ಸೇದಿದರೆ ಜೈಲು ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಲಾಗುವುದು. ಇದು ಲ್ಯಾಂಡ್ ಮಾರ್ಕ್ ತೀರ್ಪು. ಈ ತೀರ್ಪಿನ ಪ್ರತಿ ಎಲ್ಲಾ ಹೈಕೋರ್ಟ್​ಗಳಿಗೆ ಮತ್ತು ಜೈಲುಗಳಿಗೂ ಕಳುಹಿಸುವಂತೆ ಸುಪ್ರೀಂಕೋರ್ಟ್ ಖಡಕ್​ ಸೂಚನೆ ನೀಡಿದೆ.


Spread the love

LEAVE A REPLY

Please enter your comment!
Please enter your name here