ಮಾ.3ರಂದು ಬೆಳಗಾವಿಯಲ್ಲಿ ರಾಜ್ಯಮಟ್ಟದ ಸಮ್ಮೇಳನ

0
rafi
Spread the love

ವಿಜಯಸಾಕ್ಷಿ ಸುದ್ದಿ, ಗದಗ : ರಾಜ್ಯ ಮಟ್ಟದ ಸರ್ಕಾರಿ ಮುಸ್ಲಿಂ ನೌಕರರ ಮಹಾಸಮ್ಮೇಳನ, ಅಲ್ಪಸಂಖ್ಯಾತರ ಕಲ್ಯಾಣ ಯೋಜನೆಗಳ ಹಾಗೂ ಶೈಕ್ಷಣಿಕ, ಔದ್ಯೋಗಿಕ ಯೋಜನೆಗಳ ಅರಿವು ಕಾರ್ಯಕ್ರಮ ಮಾ. 3ರಂದು ರವಿವಾರ ಬೆಳಗಾವಿಯ ಸನ್ಮಾನ ಹೋಟೇಲ್ ಬಳಿ ಇರುವ ಗಾಂಧಿ ಭವನದಲ್ಲಿ ನಡೆಯಲಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ಮುಸ್ಲಿಂ ನೌಕರರ ನೌಕರರ ಕ್ಷೇಮಾಭಿವೃದ್ಧಿ ಸಂಘದ ಗದಗ ಜಿಲ್ಲಾ ಘಟಕದ ಅಧ್ಯಕ್ಷ ಡಾ. ಸಿ.ಎಂ. ರಫೀ ಹೇಳಿದರು.

Advertisement

ಅವರು ಗುರುವಾರ ಗದಗ ಜಿಲ್ಲಾ ಘಟಕ ಏರ್ಪಡಿಸಿದ್ದ ಮಹಾಸಮ್ಮೇಳನದ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ಸಮ್ಮೇಳನವನ್ನು ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷ ಯು.ಟಿ. ಖಾದರ್ ಉದ್ಘಾಟಿಸುವರು. ಅಧ್ಯಕ್ಷತೆಯನ್ನು ಬೆಳಗಾವಿ ಉತ್ತರ ಶಾಸಕ ಆಸಿಫ್ (ರಾಜು) ಸೇಠ್ ವಹಿಸುವರು. ಮುಖ್ಯ ಅತಿಥಿಗಳಾಗಿ ಸಚಿವರಾದ ಸತೀಶ್ ಜಾರಕಿಹೊಳಿ, ಲಕ್ಷ್ಮಿ ಹೆಬ್ಬಾಳಕರ್, ರಹೀಮ್‌ಖಾನ್, ಬಿ.ಝಡ್. ಜಮೀರ್ ಅಹ್ಮದ್‌ಖಾನ್, ಮಧು ಬಂಗಾರಪ್ಪ, ಶಾಸಕರಾದ ತನ್ವೀರ್ ಸೇಠ್, ಎನ್.ಎ. ಹಾರಿಸ್, ಕನೀಜ್ ಫಾತಿಮಾ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ವಿ.ಪ ಸದಸ್ಯ ಪ್ರಕಾಶ ಹುಕ್ಕೇರಿ, ರಾಜ್ಯಸಭಾ ಸದಸ್ಯ ಡಾ.ಸೈಯದ್ ನಾಸಿರ್‌ಹುಸೇನ್ ಆಗಮಿಸುವರು.

ಗೌರವಾನ್ವಿತ ಅತಿಥಿಗಳಾಗಿ ವಿ.ಪ ಮುಖ್ಯ ಸಚೇತಕ ಸಲೀಮ್ ಅಹ್ಮದ್, ವಿ.ಪ ಸದಸ್ಯರಾದ ಕೆ.ಅಬ್ದುಲ್ ಜಬ್ಬಾರ್, ಮಾಜಿ ಶಾಸಕ ಫಿರೋಜ್ ಸೇಠ್, ರಾಜ್ಯ ವಕ್ಪ ಮಂಡಳಿ ಅಧ್ಯಕ್ಷ ಅನ್ವರ್ ಬಾಷಾ, ಶಾಸಕರಾದ ರಿಜ್ವಾನ್ ಅರ್ಶದ್, ಇಕ್ಬಾಲ್‌ಹುಸೇನ್, ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಅಬ್ದುಲ್ ಅಜೀಮ್, ಮಾಜಿ ಸಚಿವರಾದ ಅಬ್ದುಲ್ ಹಕೀಮ್ ಹಿಂಡಸಗೇರಿ ಸೇರಿದಂತೆ ಚುನಾಯಿತ ಜನಪ್ರತಿನಿಧಿಗಳು, ಹಿರಿಯ ಅಧಿಕಾರಿಗಳು, ಕೆಎಸ್‌ಜಿ/ಎಂ.ಇ.ಡಬ್ಲ್ಯೂ.ಎ (ಮೇವಾ) ಸಂಘಟನೆಯ ರಾಜ್ಯ ಹಾಗೂ ಜಿಲ್ಲಾ ಪದಾಧಿಕಾರಿಗಳು, ಸಮಾಜ ಮುಖಂಡರು ಪಾಲ್ಗೊಳ್ಳುವರು.

ಸಮ್ಮೇಳನದಲ್ಲಿ ಉತ್ತಮ ಕಾರ್ಯ ನಿರ್ವಹಿಸಿದ ಜಿಲ್ಲಾಧ್ಯಕ್ಷ ಮತ್ತು ಕಾರ್ಯದರ್ಶಿಗಳಿಗೆ ಸನ್ಮಾನ ನಡೆಯಲಿದ್ದು, ಗದಗ ಜಿಲ್ಲೆಯ ಸಮಸ್ತ ಸರ್ಕಾರಿ ಮುಸ್ಲಿಂ ನೌಕರರು ಸಮ್ಮೇಳನದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕೆಂದು ಡಾ. ಸಿ.ಎಂ. ರಫೀ ವಿನಂತಿಸಿದರು.

ರಾಜ್ಯ ಘಟಕದ ಉಪಾಧ್ಯಕ್ಷ ನಿಯಾಜ್ ಅಹ್ಮದ್ ಹಂಚಿನಮನಿ, ಪ್ರಧಾನ ಕಾರ್ಯದರ್ಶಿ ರಶೀದ್, ಮೆಹಬೂಬ ತಾಳಿಕೋಟಿ, ಅಬ್ದುಲ್ ಮುನ್ನಾಫ ಬಿಜಾಪುರ, ಮೋದಿನಸಾಬ ಬುಕ್ಕಿಟಗಾರ ಮುಂತಾದವರು ಉಪಸ್ಥಿತರಿದ್ದರು.
ರಾಜ್ಯ ಘಟಕದ ಉಪಾಧ್ಯಕ್ಷ ನಿಯಾಜ್ ಅಹ್ಮದ್ ಹಂಚಿನಮನಿ, ಉಪಾಧ್ಯಕ್ಷ ಎ.ಎಲ್. ಬಿಜಾಪೂರ, ಪ್ರಧಾನ ಕಾರ್ಯದರ್ಶಿ ರಶೀದ್, ಸಂಘಟನಾ ಕಾರ್ಯದರ್ಶಿ ಮೆಹಬೂಬ ತಾಳಿಕೋಟಿ, ಮೋದಿನಸಾಬ ಬುಕ್ಕಿಟಗಾರ ಸೇರಿದಂತೆ ಇತರ ಪದಾಧಿಕಾರಿಗಳು ಕಾರ್ಯಕಾರಿ ಮಂಡಳಿ ಸದಸ್ಯರು ಸಭೆಯಲ್ಲಿದ್ದು ಸಲಹೆ ಸೂಚನೆ ನೀಡಿದರು.

ಕರ್ನಾಟಕ ರಾಜ್ಯ ಸರ್ಕಾರಿ ಮುಸ್ಲಿಂ ನೌಕರರ ನೌಕರರ ಕ್ಷೇಮಾಭಿವೃದ್ಧಿ ಸಂಘ ಬೆಂಗಳೂರು ಹಾಗೂ ಜಿಲ್ಲಾ ಘಟಕ ಬೆಳಗಾವಿ ಘಟಕದ ಸಂಯುಕ್ತ ಆಶ್ರಯದಲ್ಲಿ ಮಹಾ ಸಮ್ಮೇಳನ ನಡೆಯಲಿದ್ದು, ರಾಜ್ಯದಾದ್ಯಂತ ಸರ್ಕಾರಿ ಮುಸ್ಲಿಂ ನೌಕರರು ಪಾಲ್ಗೊಳ್ಳಲಿದ್ದಾರೆ. ಗದಗ ಜಿಲ್ಲೆಯ ಸರ್ಕಾರಿ ಮುಸ್ಲಿಂ ನೌಕರರು ಸಮ್ಮೇಳನದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿಕೊಂಡರು.


Spread the love

LEAVE A REPLY

Please enter your comment!
Please enter your name here