ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಸರಕಾರಿ ಪ್ರಾಥಮಿಕ ಉರ್ದು ಶಾಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆ ಆಯುಕ್ತರ ಕಚೇರಿ ಬೆಂಗಳೂರು ಹಾಗೂ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಗದಗ ಇವುಗಳ ಸಹಯೋಗದಲ್ಲಿ ನಡೆದ ಜಿಲ್ಲಾಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ವಿಜ್ಞಾನ ವಸ್ತುಪ್ರದರ್ಶನ ಸ್ಪರ್ಧೆಯಲ್ಲಿ ಭಾಗವಹಿಸಿದ ಗೊಜನೂರಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 9ನೇ ತರಗತಿಯ ವಿದ್ಯಾರ್ಥಿ ಪುನೀತ್ ರೆಡ್ಡಿ ಎನ್.ಎ ಜಿಲ್ಲಾಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.
ಸಾಧಕ ವಿದ್ಯಾರ್ಥಿಗೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಚಾರ್ಯ ನಿಂಗಪ್ಪ ಹತ್ತಿಕಾಳ, ಮಾರ್ಗದರ್ಶನ ನೀಡಿದ ವಿಜ್ಞಾನ ಶಿಕ್ಷಕರಾದ ಶಂಕ್ರಮ್ಮ ಹಾಗೂ ಸಮಸ್ತ ಗುರು ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.



