ರಾಜ್ಯ ಸಚಿವೆಗೆ ಅವಾಚ್ಯ ಶಬ್ದಗಳಿಂದ ನಿಂದನೆ: CT ರವಿಗೆ ಬಿಗ್ ರಿಲೀಫ್ ಕೊಟ್ಟ ಹೈಕೋರ್ಟ್!

0
Spread the love

ಬಿಜೆಪಿ ಎಂಎಲ್​ಸಿ ಸಿಟಿ ರವಿಗೆ ಕರ್ನಾಟಕ ಹೈಕೋರ್ಟ್​ ಬಿಗ್ ರಿಲೀಫ್ ಕೊಟ್ಟಿದೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಸಿಟಿ ರವಿ ವಿರುದ್ಧ ಫೆಬ್ರವರಿ 30 ರವರೆಗೆ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಸೂಚಿಸಿದೆ.

Advertisement

ಸದನದಲ್ಲಿ ನಡೆದ ವಿಚಾರಕ್ಕೆ ವಿನಾಯಿತಿ ಇದೆ ಎಂದು ಸಿಟಿ ರವಿ ಪರವಾಗಿ ಹಿರಿಯ ವಕೀಲ ಸಿವಿ ನಾಗೇಶ್ ವಾದ ಮಂಡಿಸಿದರು. ಇದಕ್ಕೆ ಪ್ರತಿಯಾಗಿ ಕ್ರಿಮಿನಲ್ ಕೃತ್ಯಗಳಿಗೆ ವಿನಾಯಿತಿ ಇಲ್ಲವೆಂದು ಎಸ್​ಪಿಪಿ ಬಿಎ ಬೆಳ್ಳಿಯಪ್ಪ ವಾದ ಮಂಡಿಸಿದರು.

ತನಿಖೆ ವ್ಯಾಪ್ತಿಯ ಪ್ರಶ್ನೆಯನ್ನು ನಾವು ತೀರ್ಮಾನಿಸಬೇಕಿದೆ ಎಂದ ಹೈಕೋರ್ಟ್, ಬಲವಂತದ ಕ್ರಮ ಕೈಗೊಳ್ಳದಂತೆ ಆದೇಶ ನೀಡಿದೆ. ಸಿಟಿ ರವಿ ವಾಯ್ಸ್ ಸ್ಯಾಂಪಲ್ ತೆಗೆದುಕೊಳ್ಳಬೇಕಿದೆ ಎಂದು ಎಸ್​​​ಪಿಪಿ ವಾದ ಮಂಡಿಸಿದರು. ಆದಾಗ್ಯೂ ಮುಂದಿನ ಪ್ರಶ್ನೆ ಬಗ್ಗೆ ತೀರ್ಮಾನಿಸುವವರೆಗೆ ಕಾಯುವಂತೆ ಹೈಕೋರ್ಟ್ ಸೂಚನೆ ನೀಡಿತು.ಈ ಮೂಲಕ ಸಿಟಿ ರವಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.


Spread the love

LEAVE A REPLY

Please enter your comment!
Please enter your name here