ರಾಜ್ಯ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರನ ಕೊರಳಲ್ಲೂ ಇದೆ ಹುಲಿ ಉಗುರಿನ ಪೆಂಡೆಂಟ್!

0
Spread the love

ಬೆಳಗಾವಿ ;- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ, ಮೃಣಾಲ್ ಹೆಬ್ಬಾಳ್ಕರ್ ಹುಲಿ ಉಗುರಿನ ಪೆಂಡೆಂಟ್ ಧರಿಸಿರುವ ಫೋಟೋ ವೈರಲ್ ಆಗುತ್ತಿದೆ. ಈ ಬಗ್ಗೆ ವರದಿ ಬೆನ್ನಲ್ಲೇ ಬೆಳಗಾವಿ ಅರಣ್ಯ ಇಲಾಖೆ ಅಧಿಕಾರಿಗಳು ಅಲರ್ಟ್ ಆಗಿದ್ದಾರೆ.

Advertisement

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಧರಿಸಿರುವ ಹುಲಿ ಉಗುರಿನ ಬಗ್ಗೆ ಶೀಘ್ರದಲ್ಲೇ ಪರಿಶೀಲಿಸಲಾಗುತ್ತದೆ. ಮಾಧ್ಯಮದ ಮೂಲಕ ಸಚಿವರ ಪುತ್ರನ ಪೆಂಡೆಂಟ್ ಬಗ್ಗೆ ಮಾಹಿತಿ ಸಿಕ್ಕಿದೆ. ಹುಲಿ ಉಗುರಿನ ಪೆಂಡೆಂಟ್ ಬಗ್ಗೆ ಪರಿಶೀಲನೆ ನಡೆಸುವಂತೆ ಅರಣ್ಯ ಇಲಾಖೆಯ ಕೆಳಹಂತದ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಇಂದು ಸಂಜೆಯೊಳಗೆ ಹುಲಿ ಉಗುರಿನ ಸತ್ಯಾಸತ್ಯತೆ ಬಗ್ಗೆ ಪರಿಶೀಲಿಸುತ್ತೇವೆ. ಏನಾದರೂ ತಪ್ಪು ಕಂಡುಬಂದರೆ ಸರ್ಕಾರದ ಸಮಿತಿಗೆ ವರದಿ ನೀಡುತ್ತೇವೆ ಎಂದು ಬೆಳಗಾವಿ ಡಿಸಿಎಫ್ ಶಂಕರ ಕಲ್ಲೋಳಕರ್ ಮಾಹಿತಿ ನೀಡಿದರು.

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅಳಿಯನ ಕೊರಳಲ್ಲೂ ಹುಲಿ ಉಗುರಿನ ಲಾಕೆಟ್ ಧರಿಸಿರುವ ಫೋಟೋ ಕೂಡ ವೈರಲ್ ಆಗುತ್ತಿದೆ. ಲಕ್ಷ್ಮೀ ಹೆಬ್ಬಾಳಕರ್ ಅಕ್ಕನ ಮಗಳನ್ನು ಮದುವೆಯಾಗಿರುವ ರಜತ್ ಉಳ್ಳಾಗಡ್ಡಿಮಠ ಧರಿಸಿರುವ ಲಾಕೆಟ್ ಬಗ್ಗೆ ಚರ್ಚೆ ಶುರುವಾಗಿತ್ತು. ಮದುವೆ ಸಮಯದಲ್ಲಿ ಫೋಟೋ ಶೂಟ್ನಲ್ಲಿ ಹುಲಿ ಉಗುರು ಮಾದರಿ ಚೈನ್ ಧರಿಸಿದ್ದ ರಜತ್ ಫೋಟೋ ವೈರಲ್ ಆಗಿತ್ತು.


Spread the love

LEAVE A REPLY

Please enter your comment!
Please enter your name here