ಛತ್ತೀಸ್ಗಢ:- ಉಕ್ಕಿನ ಸ್ಥಾವರದ ಕಟ್ಟಡ ಕುಸಿದು ಆರು ಮಂದಿ ಸಾವನ್ನಪ್ಪಿರುವ ಘಟನೆ ಛತ್ತೀಸ್‌ಗಢದ ರಾಯ್‌ಪುರದಲ್ಲಿ ಜರುಗಿದೆ.
ಘಟನೆಯಲ್ಲಿ ಐದಕ್ಕೂ ಹೆಚ್ಚು ಜನರಿಗೆ ಗಾಯವಾಗಿದೆ. ಕುಸಿದ ಕಟ್ಟಡದ ಅವಶೇಷಗಳ ಅಡಿಯಲ್ಲಿ ಇನ್ನೂ ಕೆಲವರು ಸಿಲುಕಿಕೊಂಡಿದ್ದಾರೆ ಎನ್ನಲಾಗಿದೆ. ವಿಷಯ ತಿಳಿದ ಕೂಡಲೆ ಪೊಲೀಸ್ ತಂಡಗಳು ಘಟನಾ ಸ್ಥಳಕ್ಕೆ ಧಾವಿಸಿವೆ. ಈ ಪ್ರದೇಶದಲ್ಲಿ ಸಮಗ್ರ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ. “ಗೋದಾವರಿ ಇಸ್ಪ್ಯಾಟ್ ಬಳಿ ಛಾವಣಿ ಕುಸಿದು ಕೆಲವು ಜನರು ಸಿಲುಕಿಕೊಂಡಿದ್ದಾರೆ ಎಂಬ ಮಾಹಿತಿ ನಮಗೆ ಸಿಕ್ಕಿತು.
ಪೊಲೀಸರು ಮತ್ತು ಇತರ ಅಧಿಕಾರಿಗಳು ಸ್ಥಳಕ್ಕೆ ತಲುಪಿದರು. ತಕ್ಷಣ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು. 6 ಮೃತ ದೇಹಗಳನ್ನು ಹೊರತೆಗೆಯಲಾಗಿದೆ ಮತ್ತು 6 ಗಾಯಗೊಂಡ ಜನರನ್ನು ಇಲ್ಲಿಯವರೆಗೆ ರಕ್ಷಿಸಲಾಗಿದೆ. ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ” ಎಂದು ಎಸ್ಪಿ ತಿಳಿಸಿದ್ದಾರೆ. ಈ ಘಟನೆಯ ಬಗ್ಗೆ ಸಿಎಂ ವಿಷ್ಣು ದೇವ್ ಸಾಯಿ ಸಂತಾಪ ವ್ಯಕ್ತಪಡಿಸಿದ್ದಾರೆ.