Breaking News: ಇಬ್ಬರು ಹೆಣ್ಣು ಮಕ್ಕಳನ್ನು ಬರ್ಬರವಾಗಿ ಕೊಲೆಗೈದ ಮಲ ತಂದೆ!

0
Spread the love

ಬೆಂಗಳೂರು:- ರಾಜಧಾನಿ ಬೆಂಗಳೂರಿನ ಅಮೃತಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಕಾವೇರಿನಗರದಲ್ಲಿ ಮಲ ತಂದೆಯಿಂದ ಇಬ್ಬರು ಹೆಣ್ಣು ಮಕ್ಕಳ ಬರ್ಬರ ಕೊಲೆ ನಡೆದಿರುವ ಘಟನೆ ಜರುಗಿದೆ.

Advertisement

ಕೊಲೆಯಾದ ಮಹಿಳೆ ಉತ್ತರ ಭಾರತ ಮೂಲದವರು ಎನ್ನಲಾಗಿದೆ. ಸುಮಾರು 14 ಹಾಗೂ 15 ವರ್ಷದ ಹೆಣ್ಣು ಮಕ್ಕಳನ್ನ ಮಲತಂದೆ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ತಾಯಿ ಮುಂದೇಯೆ ಕೊಲೆ‌ಮಾಡಿರುವ ಶಂಕೆ ವ್ಯಕ್ತವಾಗಿದೆ.

ಮಕ್ಕಳನ್ನು ಕೊಂದು ಆರೋಪಿ ಎಸ್ಕೇಪ್ ಆಗಿದ್ದಾನೆ. ಸ್ಥಳಕ್ಕೆ ಈಶಾನ್ಯ ವಿಭಾಗ ಡಿಸಿಪಿ ಸಜೀತ್, ಅಮೃತಹಳ್ಳಿ ಪೊಲೀಸ್ರ ತಂಡ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಸದ್ಯ ಕೊಲೆಯಾದವರ ಹಿನ್ನೆಲೆ‌ಯ ಬಗ್ಗೆ ಪೊಲೀಸರು ಪರಿಶೀಲನೆ ಮಾಡಿದ್ದಾರೆ.


Spread the love

LEAVE A REPLY

Please enter your comment!
Please enter your name here